ಕೇಂದ್ರ ಸರ್ಕಾರದಿಂದ ದೇಶದ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಭಾಗ್ಪುರದಲ್ಲಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.
ಪ್ರಧಾನ ಮಂತ್ರಿ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಕೊಮ್ಮೆ 2000 ರೂಪಾಯಿಗಳ ಮೂರು ಕಂತಿನ ಹಣವನ್ನು ಅಂದರೆ ವರ್ಷಕ್ಕೆ 6000 ರೂಪಾಯಿ ಆರ್ಥಿಕ ಸಹಾಯ ಪಡೆಯುತ್ತಾರೆ. ಭಾರತ ದೇಶದ 9.8 ಕೋಟಿ ರೈತರು ಈ ಯೋಜನೆಯ ಸಹಾಯ ಪಡೆಯುತ್ತಾರೆ. ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ 19ನೇ ಕಂತಿನ ಒಟ್ಟು 22,000 ಕೋಟಿ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಇದನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಇದುವರೆಗೆ ಒಟ್ಟು 3.46 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಿದ್ದು, ಇದೀಗ 19ನೇ ಕಂತು ಬಿಡುಗಡೆಯಾದ ನಂತರ ಈ ಮೊತ್ತವು 3.68 ಲಕ್ಷ ಕೋಟಿ ರೂಪಾಯಿ ಆಗಲಿದೆ.
ಈ ಯೋಜನೆ ಪಡೆಯಲು ಇರಬೇಕಾದ ಅರ್ಹತೆಗಳೆಂದರೆ
* ಭಾರತೀಯ ನಾಗರೀಕರಾಗಿರಬೇಕು
* ಸಾಗುವಳಿ ಭೂಮಿಯ ಮಾಲೀಕರಾಗಿರಬೇಕು
* ತಿಂಗಳಿಗೆ ಕನಿಷ್ಠ 10,000 ರೂಪಾಯಿಗಳ ಪಿಂಚಣಿ ಪಡೆಯುವ ನಿವೃತ್ತರಾಗಿರಬಾರದು
* ಸಣ್ಣ ಅಥವಾ ಅತಿ ಸಣ್ಣ ರೈತರಾಗಿರಬೇಕು
* ಆದಾಯ ತೆರಿಗೆಗೆ ಅರ್ಜಿ ಸಲ್ಲಿಸಿರಬಾರದು
* ಸಾಂಸ್ಥಿಕ ಭೂಮಾಲೀಕರಾಗಿರಬಾರದು