ಗುಬ್ಬಿ :
ಗುಬ್ಬಿ ತಾಲೂಕಿನ ಕಡಬ ಗ್ರಾಮ ಪಂಚಾಯ್ತಿಯಲ್ಲಿ ಉಪಾಧ್ಯಕ್ಷರ ಚುನಾವಣೆ ನಡೆಸಲಾಗಿದ್ದು, ಉಪಾಧ್ಯಕ್ಷರಾಗಿ ಸದಸ್ಯೆ ಪೂರ್ಣಿಮಾ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಕಲ್ಪನಾ ಎಂಬುವವರು ರಾಜೀನಾಮೆ ಸಲ್ಲಿಸಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಗಿತ್ತು, ಆದರೆ ಚುನಾವಣೆಗೆ ಪೂರ್ಣಿಮಾ ಶಿವಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಪೂರ್ಣಿಮಾ ಅವರನ್ನು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿ ಘೋಷಣೆ ಮಾಡಲಾಯಿತು. ಈ ವೇಳೆ ಬೆಂಬಲಿಗರು ಪಟಾಕಿ ಸಿಡಿಸಿ, ಹೂವಿನ ಹಾರ, ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಉಪಾಧ್ಯಕ್ಷೆ ಪೂರ್ಣಿಮಾ ಮಾತನಾಡಿ, ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲಾ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮಾತನಾಡಿ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿ ಕೊಳ್ಳಲಾಗುವುದು ಎಂದರು. ಅಲ್ಲದೇ ನರೇಗಾ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ತಾಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ ಎಂದರು.
ಈ ವೇಳೆ ಸದಸ್ಯರಾದ ಕಲ್ಪನಾ, ರಂಗನಾಥ್,ಶಿಲ್ಪ, ಲೋಕೇಶ್, ನಾಗರತ್ನ, ಪುಟ್ಟತಾಯಮ್ಮ, ಭರತ್ ಗೌಡ ಹಾಗೂ ಮುಖಂಡರಾದ ಚಿಕ್ಕ ತಿಮ್ಮಯ್ಯ, ರಾಜೇಶ್ ಗೌಡ, ಕಡಬ ಶಂಕರ್, ಪಿಡಿಓ ನಟರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.