ಗುಬ್ಬಿ:
ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿ ಅಳಿಲುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಿವಕುಮಾರ್‌ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿದ್ದ ನೇತ್ರಾವತಿ ಎಂಬುವವರು ರಾಜೀನಾಮೆ ನೀಡಿದ್ದರಿಂದ ಸ್ಥಾನ ತೆರವಾಗಿತ್ತು. ಮೀಸಲು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಏಕೈಕ ಅಭ್ಯರ್ಥಿಯಾಗಿ ಶಿವಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ರು. ಹೀಗಾಗಿ ಶಿವಕುಮಾರಸ್ವಾಮಿ ಅವರನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯ್ತು.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಇನ್ನು ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು. ನೂತನ ಅಧ್ಯಕ್ಷ ಶಿವಕುಮಾರಸ್ವಾಮಿ ಮಾತನಾಡಿ ಅನಿರೀಕ್ಷಿತ ಗೆಲುವಿಗೆ ಕಾರಣರಾದ ಎಲ್ಲಾ ಸದಸ್ಯರಿಗೂ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ರು. ಎರಡು ಬಾರಿ ಅಧ್ಯಕ್ಷನಾದ ನನಗೆ ಅನುಭವವಿದೆ. ಆ ಅನುಭವದ ಮೇರೆಗೆ ಎಲ್ಲಾ ಕೆಲಸಗಳನ್ನೂ ನಿಭಾಯಿಸುತ್ತೇನೆ ಎಂದರು.
ಈ ವೇಳೆ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಮುನಾ ರಮೇಶ್ , ಸದಸ್ಯರಾದ ಯೋಗೀಶ್ವರ್ , ರಾಧಮ್ಮ, ಶಿವರಾಜು , ಯೋಗೀಶ್ , ಪಿಡಿಓ ವಸಂತ್, ಗ್ರಾಮಸ್ಥರು ಹಾಗೂ ಮುಂತಾದವರು ಉಪಸ್ಥಿತರಿದ್ದರು.