ಜಮ್ಮು -ಕಾಶ್ಮೀರ : ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಆಗಿರುವ ಚೆನಾಬ್ ಸೇತುವೆ ಉದ್ಘಾಟಿಸಿದರು. ಈ ಸೇತುವೆ ಹಿಮಾಲಯದ ಪರ್ವತದ ಮಧ್ಯೆ, ಚೆನಾಬ್ ನದಿಯ ಮೇಲೆ ನಿರ್ಮಿಸಲಾಗಿದೆ. ಇದೇ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ಭಾರತದಲ್ಲಿನ ಮೊಟ್ಟ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ - ಅಂಜಿ ಸೇತುವೆ (Anji Bridge) ಯನ್ನೂ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿಯಾಗಿರುವ ಒಮರ್ ಅಬ್ದುಲ್ಲಾ ಮತ್ತು ರಾಜ್ಯಪಾಲ ಮನೋಜ್ ಸಿನ್ಹಾ ಉಪಸ್ಥಿತರಿದ್ದರು. ಉದ್ಘಾಟನೆಯ ನಂತರ, ಪ್ರಧಾನಿ ಮೋದಿ ರಾಷ್ಟ್ರಧ್ವಜ ಹಿಡಿದು ಸೇತುವೆಯ ಮೇಲೆ ಒಂದು ಸುತ್ತು ಪ್ರದಕ್ಷಿಣೆ ಹಾಕಿದರು ಮತ್ತು ಸೇತುವೆಯ ನಿರ್ಮಾಣದ ಹಿಂದೆ ದುಡಿದ ಇಂಜಿನಿಯರ್‌ಗಳು ಹಾಗೂ ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಿದರು.

ಇನ್ನು ಇದೇ ವೇಳೆ ಜಮ್ಮು-ಕಾಶ್ಮೀರದ ಪ್ರವಾಸೋದ್ಯಮ ಮತ್ತು ಸಂಪರ್ಕ ಸೌಲಭ್ಯವನ್ನು ಹೆಚ್ಚಿಸುವ ಉದ್ದೇಶದಿಂದ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೂ ಪ್ರಧಾನಿ ಚಾಲನೆ ನೀಡಿದರು. ಅಲ್ಲದೇ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಂವಾದ ಸಹ ನಡೆಸಿದರು.

ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಚೆನಾಬ್‌ ಸೇತುವೆ ಐಫೆಲ್ ಟವರ್‌ಗಿಂತಲೂ ಎತ್ತರವಾಗಿ ನಿರ್ಮಾಣವಾಗಿರುವ, ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

Author:

...
Sushmitha N

Copy Editor

prajashakthi tv

share
No Reviews