ತುಮಕೂರು:
ಜಮ್ಮು- ಕಾಶ್ಮಿರದ ಪಹಲ್ಗಾಮ್ ದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಿದ್ರು. ಈ ದಾಳಿಯಲ್ಲಿ ಇದುವರೆವಿಗೂ ಸುಮಾರು 30 ಮಂದಿ ಮೃತಪಟ್ಟಿದ್ದಾರೆ. ಉಗ್ರರ ಅಟ್ಟಹಾಸವನ್ನು ಖಂಡಿಸಿ ತುಮಕೂರು ನಗರದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡಸಿದರು.
ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ಖಂಡಿಸಿ ಬಿಜೆಪಿ ಘಟಕದ ವತಿಯಿಂದ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಿದರು. ಕಾಶ್ಮೀರದಲ್ಲಿ ಶಾಂತಿ ಕದಡುತ್ತಿರುವ ಉಗ್ರ ಗಾಮಿಗಳಿಗೆ, ಹೇಡಿ ಜಿಹಾದಿ ಉಗ್ರರಿಗೆ ಧಿಕ್ಕಾರ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ನೇತೃತ್ವದ ಪ್ರತಿಭಟನೆಯಲ್ಲಿ ಹಾಜರಿದ್ದರು.