PUC ಪರೀಕ್ಷಾ ಕೇಂದ್ರದ ಸುತ್ತ ಖಡಕ್ ರೂಲ್ಸ್ ಜಾರಿ...!

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಉದ್ಯೋಗ-ಶಿಕ್ಷಣ

ಬೆಂಗಳೂರು:

ಮಾರ್ಚ್‌ 1 ರಿಂದ ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಸುವ್ಯಸ್ಥಿತವಾಗಿ ನಡೆಸಲು ಅಗತ್ಯವಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಪರೀಕ್ಷಾ ಕುರಿತು ಪೂರ್ವಾಬಾವಿ ಸಭೆಗಳನ್ನು ನಡೆಸಲಾಗಿದೆ. ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ಪ್ರಶ್ನೆ ಪತ್ರಿಕೆಯನ್ನು ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಕ ಮಾಡಲಾಗಿದ್ದು. ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗುತ್ತದೆ. ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುತ್ತದೆ. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ಕೊಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಹಿಂದಿರುಗಲು ಸರ್ಕಾರಿ ಬಸ್‌ ಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳಬೇಕು ಎಂದು ಸೂಚನೆ ಕೊಡಲಾಗಿದೆ.



 

Author:

...
Editor

ManyaSoft Admin

Ads in Post
share
No Reviews