ಪುತ್ತೂರು:
ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬದಿಂದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಡೆದಿದೆ.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಇಂದ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೆಂಕಿಯು ಸುಮಾರು ಮೂರು ಎಕರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿದೆ, ಬೆಂಕಿಯ ಕೆನ್ನಾಲಗೆಗೆ ಮರಗಿಡಗಳು ಸುಟ್ಟು ಹೋಗಿದ್ದು ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಇನ್ನು ವಿಷಯ ತಿಳಿದ ಮುಂಡೂರು ವಲಯ ಕಾಂಗ್ರೇಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಅವರು ಅಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದ್ದಾರೆ. ಘಟನಾ ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.