ರಾಯಚೂರು : ಸಿಡಿಮದ್ದು ಸ್ಪೋಟದಿಂದ ಓರ್ವ ಕಾರ್ಮಿಕ ಸಾವು | ಇನ್ನೋರ್ವನಿಗೆ ಗಂಭೀರ ಗಾಯ

ರಾಯಚೂರು:

ಗ್ರಾನೈಟ್‌ ಗಣಿಯಲ್ಲಿ ಸಿಡಿಮದ್ದು ಸ್ಪೋಟದಿಂದ ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರ ಗ್ರಾಮದಲ್ಲಿ ನಡೆದಿದೆ. ಮೆಣಸಿಗೇರಿ ಗ್ರಾಮದ ನಿವಾಸಿ ವೆಂಕಟೇಶ್‌ ಎಂಬಾತ ಮೃತ ದುರ್ದೈವಿಯಾಗಿದ್ದಾನೆ.

ಮಾಕಾಪುರ ಗ್ರಾಮದಲ್ಲಿ ಗಡಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತೇ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೇ ಸಿಡಿಮದ್ದು ಸ್ಪೋಟದಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೋರ್ವ ಮಹಾಲಿಂಗಪ್ಪ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮುದುಕಲ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Author:

share
No Reviews