ತುಮಕೂರು - ರಾಯದುರ್ಗ ರೈಲ್ವೆ ಯೋಜನೆ ವಿ. ಸೋಮಣ್ಣ ಗುಡ್ ನ್ಯೂಸ್

ತುಮಕೂರು - ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಬಗ್ಗೆ ಸಚಿವ ವಿ ಸೋಮಣ್ಣ ಮಾತನಾಡಿದ್ದಾರೆ. ಮುಂದಿನ ಮೂರು ವರ್ಷದಲ್ಲಿ ಯೋಜನೆ ಪೂರ್ಣಗೊಳ್ಳುವ ಭರವಸೆ ನೀಡಿದ್ದಾರೆ. ಜತೆಗೆ ಕೇಂದ್ರದಿಂದ ರಾಜ್ಯಕ್ಕೆ ಅಧಿಕ ರೈಲ್ವೆ ಅನುದಾನ ಸಿಕ್ಕಿದೆ ಎಂದು ತಿಳಿಸಿದರು. ಈ ಬಗ್ಗೆ ವಿವರ ಇಲ್ಲಿದೆ.

ತುಮಕೂರು : ತುಮಕೂರು - ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗ ಕುರಿತು ಕೇಂದ್ರ ರೈಲ್ವೆ ಸಹಾಯಕ ಖಾತೆ ಸಚಿವ ವಿ ಸೋಮಣ್ಣ ಮಹತ್ವದ ಮಾಹಿತಿ ನೀಡಿದ್ದು, ಇನ್ನು ಮೂರು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.


ತುಮಕೂರಿನಲ್ಲಿ ಮೆಮು ರೈಲು ಸಂಚಾರಕ್ಕೆ ಹಸಿರು ನಿಶಾನೆ ಕಾರ್ಯಕ್ರಮದಲ್ಲಿ  ಮಾತನಾಡಿದ ಸಚಿವ ಸೋಮಣ್ಣ, " ರಾಜ್ಯದಲ್ಲಿಅನೇಕ ಹೊಸ ರೈಲು ಯೋಜನೆಗಳಿಗೆ ಚಾಲನೆ ನೀಡಲು ಯೋಜನೆ ಸಿದ್ಧಗೊಂಡಿವೆ. ತುಮಕೂರು - ಚಿತ್ರದುರ್ಗ - ದಾವಣಗೆರೆ ಮಾರ್ಗವು 2027ರ ಒಳಗಾಗಿ ಲೋಕಾರ್ಪಣೆಗೊಳ್ಳಲಿದೆ'' ಎಂದು ಹೇಳಿದರು.

ತುಮಕೂರು ಜಿಲ್ಲಾಧಿಕಾರಿ ಬಹಳ ಕಾರ್ಯೋನ್ಮುಖರಾಗಿ ಈ ಬಗ್ಗೆ ಕೆಲಸ ನಿರ್ವಹಿಸುತ್ತಿದ್ದು ಈಗಾಗಲೆ 90 ರಷ್ಟು ರೈಲ್ವೆ ಕಾಮಗಾರಿಗೆ ಪರಿಹಾರ ಒದಗಿಸುವ ಕೆಲಸ ಮುಗಿಸದ್ದಾರೆ, ಅಂದುಕೊ0ಡ0ತೆ ಆದರೆ ಇನ್ನ2-3 ವರ್ಷಗಳಲ್ಲಿ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ಕೈಯಿಂದಲೇ ಉದ್ಘಾಟಿಸಲಾಗುವುದು ಎಂದು ತಿಳಿಸಿದರು 

Author:

...
Shabeer Pasha

Managing Director

prajashakthi tv

share
No Reviews