ತುಮಕೂರು - ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಬಗ್ಗೆ ಸಚಿವ ವಿ ಸೋಮಣ್ಣ ಮಾತನಾಡಿದ್ದಾರೆ. ಮುಂದಿನ ಮೂರು ವರ್ಷದಲ್ಲಿ ಯೋಜನೆ ಪೂರ್ಣಗೊಳ್ಳುವ ಭರವಸೆ ನೀಡಿದ್ದಾರೆ. ಜತೆಗೆ ಕೇಂದ್ರದಿಂದ ರಾಜ್ಯಕ್ಕೆ ಅಧಿಕ ರೈಲ್ವೆ ಅನುದಾನ ಸಿಕ್ಕಿದೆ ಎಂದು ತಿಳಿಸಿದರು. ಈ ಬಗ್ಗೆ ವಿವರ ಇಲ್ಲಿದೆ.
ತುಮಕೂರು : ತುಮಕೂರು - ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗ ಕುರಿತು ಕೇಂದ್ರ ರೈಲ್ವೆ ಸಹಾಯಕ ಖಾತೆ ಸಚಿವ ವಿ ಸೋಮಣ್ಣ ಮಹತ್ವದ ಮಾಹಿತಿ ನೀಡಿದ್ದು, ಇನ್ನು ಮೂರು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ಮೆಮು ರೈಲು ಸಂಚಾರಕ್ಕೆ ಹಸಿರು ನಿಶಾನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸೋಮಣ್ಣ, " ರಾಜ್ಯದಲ್ಲಿಅನೇಕ ಹೊಸ ರೈಲು ಯೋಜನೆಗಳಿಗೆ ಚಾಲನೆ ನೀಡಲು ಯೋಜನೆ ಸಿದ್ಧಗೊಂಡಿವೆ. ತುಮಕೂರು - ಚಿತ್ರದುರ್ಗ - ದಾವಣಗೆರೆ ಮಾರ್ಗವು 2027ರ ಒಳಗಾಗಿ ಲೋಕಾರ್ಪಣೆಗೊಳ್ಳಲಿದೆ'' ಎಂದು ಹೇಳಿದರು.