ಬೆಂಗಳೂರು:
ಬಿಸಿಲಿನಿಂದ ಕಂಗೆಟ್ಟಿದ ಬೆಂಗಳೂರಿಗರಿಗೆ ವರುಣ ತಂಪೆರೆದಿದ್ದಾನೆ . ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆಯೇ ತುಂತುರು ಮಳೆಯಾಗಿದೆ. ಸದಾಶಿವನಗರ, ಶಿವಾನಂದ ಸರ್ಕಲ್, ರೇಸ್ ಕೋರ್ಸ್ ರಸ್ತೆ ಮತ್ತಿಕೆರೆ ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿದೆ. ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಂಗಳೂರ ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮತ್ತು ನಾಳೆ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ಹಲವೆಡೆ ಮುಂದಿನ 2 ದಿನಗಳು ಮಳೆಯಾಗುವ ಮುನ್ಸೂಚನೆ ಇದೆ. ಏಪ್ರಿಲ್ 5 ರವರೆಗೆ ಗುಡುಗು ಸಹಿತ ಹಗುರ ಮಳೆಯಾಗು ಸಾಯತೆ ಇದೆ. ಮೈಸೂರು, ಮಂಡ್ಯ ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಮಳೆಯ ಮುನ್ಸೂಚನೆ ಕೊಡಲಾಗಿದೆ.