ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರು ಇಂದು ತಮ್ಮ 29ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಪ್ರತಿ ಬಾರಿಯೂ ಒಂದೊಂದು ದೇಶದಲ್ಲಿ ಜನ್ಮ ದಿನವನ್ನು ಆಚರಿಸಿಕೊಳ್ಳುವ ರಶ್ಮಿಕಾ ಮಂದಣ್ಣ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಗಲ್ಛ್ ರಾಷ್ಟ್ರವಾದ ಒಮನ್ ಸಲಾಲಾದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ.
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಕಿರಿಕ್ ಪಾರ್ಟಿ ಚಿತ್ರದ ಮೂಲಕ ಯಶಸ್ಸು ಕಂಡ ಅವರು ತೆಲುಗು, ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿ ದೊಡ್ಡ ಮಟ್ಟದ ಯಶಸ್ಸು ಗಳಿಸಿದ್ದಾರೆ. ರಶ್ಮಿಕಾ ನಟಿಸಿದ ಸಿನಿಮಾಗಳೆಲ್ಲವೂ ಹೆಚ್ಚು ಆದಾಯ ಗಲಿಸಿವೆ. ಹೀಗಾಗಿ ರಶ್ಮಿಕಾ ಇದೀಗ ಸಿನಿಮಾ ರಂಗದಲ್ಲಿ ಹೆಚ್ಚು ಬೇಡಿಕೆಯಿರುವ ನಟಿಯಾಗಿದ್ದಾರೆ.