RASMIKA MANDANNAಹಿಂದಿ
ರಶ್ಮಿಕಾ ಮಂದಣ್ಣ ಅವರು ಮೊದಲ ಬಾರಿಗೆ ಐತಿಹಾಸಿಕ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಯಶುಬಾಯ್ ಮಹಾರಾಣಿಯಾಗಿ ರಶ್ಮಿಕಾ ಮಿಂಚಿದ್ದು, ಮೊದಲ ಪೋಸ್ಟರ್ ಬಿಡುಗಡೆ ಆಗಿದೆ. ರಶ್ಮಿಕಾ ಮಂದಣ್ಣ ಅವರ ಮಹಾರಾಣಿ ಗೆಟಪ್ಗೆ ಅಭಿಮಾನಿಗಳು ಫಿದಾ ಆಗಿದ್ದು, ಫೋಟೋ ಫುಲ್ ವೈರಲ್ ಆಗಿದೆ.
ಪುಷ್ಪ 2 ಬಳಿಕ ರಶ್ಮಿಕಾ ಮಂದಣ್ಣ ಅವರು ಛಾವ ಸಿನಿಮಾದ ಐತಿಹಾಸಿಕ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸಿನಿಮಾ ಛತ್ರಪತಿ ಶಿವಾಜಿ ಮಹಾರಾಜರ ಉತ್ತರಾಧಿಕಾರಿ ಛತ್ರಪತಿ ಸಾಂಭಾಜಿ ಮಹಾರಾಜ್ ಜೀವನನಾಧಾರಿತ ಚಿತ್ರ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಾಂಭಾಜಿ ಮಹಾರಾಜ್ ಪತ್ನಿ ಯಶುಬಾಯ್ ಮಹಾರಾಣಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದು, ಇದೇ ಫೆಬ್ರವರಿ 14ರಂದು ಛಾವ ಬಿಡುಗಡೆ ಆಗುತ್ತಿದೆ.