IPL 2025: ತವರಿನಲ್ಲಿ ಕೊನೆಗೂ ಗೆದ್ದು ಬೀಗಿದ RCB

ಕ್ರಿಕೆಟ್:‌ 

ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನಲ್ಲಿ ಸರಣಿ ಸೋಲಿನ ಬಳಿಕ ಸೋಲಿಗೆ ಕೊನೆಗೂ ಅಂತ್ಯ ಹಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3 ಪಂದ್ಯಗಳಲ್ಲಿ ಸತತವಾಗಿ ಸೋತಿದ್ದ ರಜತ್ ಪಟಿದಾರ್ ನೇತೃತ್ವದ ತಂಡವು ರೋಮಾಂಚಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 11 ರನ್‌ಗಳಿಂದ ಸೋಲಿಸಿದೆ. 

ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ RCB ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ತಲಾ ಅರ್ಧಶತಕ ಗಳಿಸುವ ಮೂಲಕ ತಂಡಕ್ಕೆ 205 ರನ್ ಗಳಿಸಿಕೊಟ್ಟರು. 205 ರನ್‌ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 194 ರನ್‌ಗಳನ್ನು ಗಳಿಸಿತು. ಯಶಸ್ವಿ ಜೈಸ್ವಾಲ್ ಮತ್ತು ಧ್ರುವ್ ಜುರೆಲ್ ಅವರ ಬಲವಾದ ಇನ್ನಿಂಗ್ಸ್ ರಾಜಸ್ಥಾನಕ್ಕೆ ಗೆಲುವಿನ ಭರವಸೆ ನೀಡಿತು. ಆದರೆ ಜೋಶ್ ಹ್ಯಾಜಲ್‌ವುಡ್ ಮತ್ತು ಕೃನಾಲ್ ಪಾಂಡ್ಯ ತಮ್ಮ ಅತ್ಯುತ್ತಮ ಬೌಲಿಂಗ್ ಮೂಲಕ ಬೆಂಗಳೂರಿಗೆ ಸ್ಮರಣೀಯ ಗೆಲುವನ್ನು ತಂದುಕೊಟ್ಟರು.

Author:

...
Keerthana J

Copy Editor

prajashakthi tv

share
No Reviews