WPL 2025 : ಹ್ಯಾಟ್ರಿಕ್‌ ಗೆಲುವಿನ ಕನಸಿನಲ್ಲಿ ಆರ್‌ಸಿಬಿ

ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್​
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್​
ಕ್ರಿಕೆಟ್‌

ಮಹಿಳಾ ಪ್ರೀಮಿಯರ್ ಲೀಗ್ ಇಂದಿನಿಂದ  ಬೆಂಗಳೂರಿಗೆ ಶಿಫ್ಟ್ ಆಗ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್‌ನ 7ನೇ ಪಂದ್ಯ ನಡೆಯಲಿದ್ದು, ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್​ ತಂಡಗಳು ಮುಖಾಮುಖಿಯಾಗಲಿವೆ.  ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ  ಇಂದು ತನ್ನ ತವರು ಮೈದಾನದಲ್ಲಿ ಮೊದಲ ಪಂದ್ಯವನ್ನು ಆಡಲಿದೆ. ಎದುರಾಳಿ ಮೊದಲ ಆವೃತ್ತಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್. ಸ್ಮೃತಿ ಮಂಧಾನ ನೇತೃತ್ವದ ಆರ್‌ಸಿಬಿ ಹ್ಯಾಟ್ರಿಕ್ ಗೆಲುವಿನತ್ತ ಮುನ್ನುಗ್ಗಲಿದೆ. ಆದರೆ ಮುಂಬೈ ಸಹ ಬಲಿಷ್ಠ ತಂಡವಾಗಿದೆ.

ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್​ ತಂಡವನ್ನು ಸೋಲಿಸಿತ್ತು. ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಎದುರಾಗಿತ್ತು. ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ವಿಶೇಷ ಅಂದರೆ ಇವತ್ತಿನ ಪಂದ್ಯ ಬೆಂಗಳೂರಲ್ಲಿ ನಡೆಯಲಿದೆ. ಬೆಂಗಳೂರಲ್ಲಿ ಒಟ್ಟು ಮಾರ್ಚ್​ 1 ವರೆಗೆ ಒಟ್ಟು 8 ಪಂದ್ಯಗಳು ನಡೆಯಲಿವೆ. ಆರ್‌ಸಿಬಿ ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 200 ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಆರ್​ಸಿಬಿ, ಆ ನಂತರ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸಹ ಸುಲಭವಾಗಿ ಸೋಲಿಸಿತ್ತು. ಈ ಮೂಲಕ ಸ್ಮೃತಿ ಮಂಧಾನ ನೇತೃತ್ವದ ತಂಡ ನಾಲ್ಕು ಅಂಕಗಳನ್ನು ಹೊಂದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಆರ್​ಸಿಬಿಯನ್ನು ಹೊರತುಪಡಿಸಿ ಟೂರ್ನಿಯಲ್ಲಿ ಬೇರೆ ಯಾವುದೇ ತಂಡ ಇದುವರೆಗೆ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೂ ಆರ್​ಸಿಬಿಯೇ ಗೆಲುವಿನ ಫೇವರೇಟ್ ಎನಿಸಿಕೊಂಡಿದೆ. ಆರ್​ಸಿಬಿ ಇಲ್ಲಿಯವರೆಗೆ ಎರಡು ಪಂದ್ಯಗಳನ್ನು ಗೆದ್ದುಕೊಂಡು ಪಾಯಿಂಟ್ಸ್​ ಟೇಬಲ್​​ನಲ್ಲಿ ಅಗ್ರಸ್ಥಾನದಲ್ಲಿದೆ. ಇವತ್ತಿನ ಪಂದ್ಯ 7 ಗಂಟೆಗೆ ಟಾಸ್​ ಪ್ರಕ್ರಿಯೆ ನಡೆಯಲಿದೆ. 7.30 ಕ್ಕೆ ಪಂದ್ಯ ಆರಂಭವಾಗಲಿದೆ.

 

 

 

 

Author:

share
No Reviews