PAVAGADA : 18 ವರ್ಷಗಳ ಕಾಯುವಿಕೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ, ಪಾವಗಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರ್ ಸಿಬಿ ಅಭಿಮಾನಿಗಳಲ್ಲಿ ಭಾರೀ ಸಂಭ್ರಮದ ವಾತಾವರಣ ಮನೆಮಾಡಿದೆ.
ಮಂಗಳವಾರ ರಾತ್ರಿ ಅಹಮದಾಬಾದ್ನ ನಮೋ ಕ್ರೀಡಾಂಗಣದಲ್ಲಿ ನಡೆದ ಟಾಟಾ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ 6 ರನ್ಗಳ ಜಯವನ್ನು ದಾಖಲಿಸಿತು. 11:30ರ ವೇಳೆಗೆ ಪಂದ್ಯ ಅಂತ್ಯವಾಗುತ್ತಿದ್ದಂತೆಯೇ ಆರ್ಸಿಬಿ ಅಭಿಮಾನಿಗಳಲ್ಲಿ ಸಂಭ್ರಮಾಚಾರಣೆ ಮೂಡಿತು.
ಈ ಮಹತ್ವದ ಗೆಲುವಿನ ಹಿನ್ನೆಲೆಯಲ್ಲಿ ಪಾವಗಡ ಪಟ್ಟಣ ಸೇರಿದಂತೆ ವೈ.ಎನ್. ಹೊಸಕೋಟೆ, ಬ್ಯಾಡನೂರು, ಓಬಳಾಪುರ, ಮಂಗಳವಾಡ, ವೆಂಕಟಾಪುರ, ತಿರುಮಣಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ನೂರಾರು ಅಭಿಮಾನಿಗಳು ಪಟಾಕಿ ಸಿಡಿಸಿ, ಕೇಕ್ ಕಟ್ ಮಾಡಿ, ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.