IPL 2025 :
ಐಪಿಎಲ್ 2025ರ ಆವೃತ್ತಿಯ 24ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 7.30ರಿಂದ ಪಂದ್ಯ ಆರಂಭವಾಗಲಿದ್ದು, ಪಂದ್ಯ ವೀಕ್ಷಣೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
ಈಗಾಗಲೇ ಈ ಹಿಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಅವರದ್ದೇ ಹೋಂ ಗ್ರೌಂಡ್ ವಾಂಖೆಡೆಯಲ್ಲಿ ಆರ್‌ಸಿಬಿ ಗೆಲವು ಸಾಧಿಸಿ ದಾಖಲೆ ನಿರ್ಮಾಣ ಮಾಡಿದೆ. ಇದುವರೆಗೂ ಆಡಿರುವ ನಾಲ್ಕು ಪಂದ್ಯಗಳಲ್ಲಿ 3ರಲ್ಲಿ ಆರ್‌ಸಿಬಿ ಗೆಲ್ಲುವು ಸಾಧಿಸಿದ್ದು, ಈ ಮೂಲಕ ಆರು ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲಲೇಬೇಕೆನ್ನುವ ಪಣ ತೊಟ್ಟಿದೆ. ಆದ್ದರಿಂದ ಬಲಿಷ್ಠ ತಂಡವನ್ನೇ ಕಟ್ಟಿದೆ. ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೂ ಆಡಿರುವ ಮೂರು ಪಂದ್ಯಗಳಲ್ಲೂ ಕೂಡ ಗೆಲುವು ಸಾಧಿಸಿ 6 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನು ಇಂದು ಆರ್‌ಸಿಬಿ ವಿರುದ್ಧ ಭಾರೀ ರನ್‌ಗಳ ಅಂತರದಿಂದ ಗೆಲುವು ಸಾಧಿಸಿ ಮೇಲೇರುವ ತವಕದಲ್ಲಿದೆ.