ಬೆಂಗಳೂರು : ಬೆಂಗಳೂರಿನಲ್ಲಿ ಇಂದು RCB VS KKR ಹೈವೋಲ್ಟೇಜ್ ಪಂದ್ಯ | ಮಧ್ಯರಾತ್ರಿವರೆಗೆ ಮೆಟ್ರೋ ಸೇವೆ

ಬೆಂಗಳೂರು : ಭಾರತ-ಪಾಕಿಸ್ತಾನ ನಡುವಿನ ಯುದ್ಧ ಸಂಘರ್ಷದ ಹಿನ್ನೆಲೆ ಅರ್ಧಕ್ಕೆ ನಿಲ್ಲಿಸಲಾಗಿದ್ದ ಐಪಿಎಲ್ 2025 ಇಂದು ಮರು ಆರಂಭವಾಗುತ್ತಿದೆ. ಇದೀಗ ಟೂರ್ನಮೆಂಟ್ ಮತ್ತೆ ಪ್ರಾರಂಭವಾಗಿದ್ದು, ಮೊದಲ ಪಂದ್ಯ ಇಂದು ಮೇ 17ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಹೌದು, ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ನೋಡಲು ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದತ್ತ ಹರಿದುಬರುತ್ತಿದ್ದಾರೆ. ಈ ಪಂದ್ಯಾವಳಿ ವೀಕ್ಷಣೆಗೆ ತೆರಳುವಂತಹ ವೀಕ್ಷಕರ ಅನುಕೂಲಕ್ಕೆ ತಕ್ಕಂತೆ ನಮ್ಮ ಮೆಟ್ರೋ ಮಧ್ಯರಾತ್ರಿಯವರೆಗೆ ಸೇವೆಯನ್ನು ವಿಸ್ತರಣೆ ಮಾಡಿದೆ. ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ.

ಇನ್ನು ಇಂದು ಹಾಗೂ 23, 2025ರಂದು ಐಪಿಎಲ್‌ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ನಿಲ್ದಾಣದವರೆಗೂ ರೈಲು ಸೇವೆಯನ್ನು ಮಧ್ಯರಾತ್ರಿ 1ರ ವರೆಗೆ ವಿಸ್ತರಣೆ ಮಾಡಿದೆ.

ಮೆಜೆಸ್ಟಿಕ್ ನಿಲ್ದಾಣದಿಂದ ಎಲ್ಲಾ ನಾಲ್ಕು ಮಾರ್ಗಗಳತ್ತ ಕೊನೆಯ ಮೆಟ್ರೋ ರೈಲು ರಾತ್ರಿ 1.35 ಕ್ಕೆ ಹೊರಡಲಿದೆ. ಕ್ರಿಕೆಟ್ ಅಭಿಮಾನಿಗಳು ಈ ವಿಸ್ತರಿತ ಸೇವೆ ಬಳಸಿಕೊಳ್ಳುವ ಮೂಲಕ ಸುಲಭವಾಗಿ ಮನೆಗೆ ಮರಳಬಹುದು.

ಮೆಟ್ರೋ ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದು ಮೊದಲಲ್ಲ.. ಹಿಂದಿನಿಂದಲೂ ಬೆಂಗಳೂರಿನಲ್ಲಿ ಐಪಿಎಲ್‌ ಪಂದ್ಯವಳಿ ವೇಳೆ ಬಿಎಂಆರ್‌ಸಿಎಲ್‌ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡುತ್ತಲೇ ಬಂದಿದೆ.

 

 

 

 

 

Author:

...
Keerthana J

Copy Editor

prajashakthi tv

share
No Reviews