ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ.ತುಮಕೂರು
ಪಾವಗಡ:
ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ, ತುಮುಲ್ ಅಧ್ಯಕ್ಷ ಹೆಚ್,ವಿ ವೆಂಕಟೇಶ್, ತಹಶೀಲ್ದಾರ್ ವರದರಾಜು. ಇಓ ಜಾನಕಿರಾಮ್, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಇಂದ್ರಾಣಮ್ಮ ಸೇರಿ ರೈತ ಸಂಘದ ಮುಖಂಡರು ಭಾಗಿಯಾಗಿದ್ದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕ ಹೆಚ್.ವಿ ವೆಂಕಟೇಶ್ ಪ್ರತಿ ಶಾಲೆಗಳಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರು ರಚಿಸಿದ ಸಂವಿಧಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು, ಏಕೆಂದರೆ ಇತ್ತೀಚಿನ ದಿನಗಳಲ್ಲಿ ಸಂವಿಧಾನ ಬದಲಾವಣೆ ಮಾಡಲು ಕುತಂತ್ರಗಳು ನಡೆಯುತ್ತಿವೆ ಎಂದರು. ದಿನೇ ದಿನೇ ದೇಶ ಬೆಳೆಯುತ್ತಿದೆ ನಮ್ಮ ದೇಶದ ಮಕ್ಕಳು ವಿದ್ಯಾಭ್ಯಾಸ ಮಾಡಿ ರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿದ್ದಾರೆ. ವಿದ್ಯಾಭ್ಯಾಸ ಇಲ್ಲದಿದ್ದರೆ ಇಂದು ಯಾವುದೇ ತರದ ಅಭಿವೃದ್ಧಿ ಸಾಧ್ಯವಿಲ್ಲ, ಅದಕ್ಕಾಗಿ ಮಕ್ಕಳಿಗೆ ಪೋಷಕರು ವಿದ್ಯಾಭ್ಯಾಸ ನೀಡಲು ಹೆಚ್ಚು ಹೊತ್ತು ನೀಡಬೇಕು ಎಂದು ಹೇಳಿದರು.
ಮುಂದಿನ ತಿಂಗಳು ಮಾನ್ಯ ಮುಖ್ಯ ಮಂತ್ರಿಗಳು ಬಹಳಷ್ಟು ಅಭವೃದ್ದಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ, ಸುಮಾರು 12 ಕೋಟಿ ವೆಚ್ಚದಲ್ಲಿ ದೇವಸ್ಥಾನ ಅಭಿವೃದ್ದಿ ಕಾರ್ಯಕ್ಕೆ ಈಗಾಗಲೇ ಸರ್ವೇ ಕಾರ್ಯ ಹಾಗೂ ಹಣ ಬಿಡುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ಇದೇ ವೇಳೆ ತಾಲೂಕು ಆಡಳಿತದಿಂದ ಕೆಲವರಿಗೆ ನಿವೇಶನದ ಹಕ್ಕು ಪತ್ರಗಳನ್ನು ನೀಡಿದರು. ವಿವಿಧ ಶಾಲೆಗಳ ಮಕ್ಕಳು ಪಥಸಂಚಲನ ಮಾಡಿದರು, ಬಳಿಕ ದೇಶಭಕ್ತಿ ಸಾರುವ ಗೀತೆಗಳಿಗೆ ಮಕ್ಕಳು ನೃತ್ಯ ಮಾಡಿದರು.