ಶಿರಾ : ಶಿರಾದಲ್ಲಿ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕರಿಗೆ ಗ್ರಾಚ್ಯುಟಿ ನೀಡಬೇಕು ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸಿಎಂ ಗೆ ಮನವಿ ಸಲ್ಲಿಸಿದರು.
ಶಿರಾ ತಾಲ್ಲೂಕು ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ತಾಲ್ಲೂಕು ಸಮಿತಿಯ ಪದಾಧಿಕಾರಿಗಳ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ನಮಗೆ ಬರಬೇಕಾದ ಗ್ರ್ಯಾಚುಟಿ ಹಣವನ್ನು ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ವೇಳೆ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಕಲಾವತಿ ಮಾತನಾಡಿ, “ನಿವೃತ್ತರಿಗೆ ಗ್ರಾಚ್ಯುಟಿ ಸಿಗುವವರೆಗೆ ಹೋರಾಟ ಮಾಡಲಿದ್ದೇವೆ. ಗ್ರಾಚ್ಯುಟಿ ಕಾಯಿದೆ 1972ರ ಅಡಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಅದರಂತೆ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗ್ರಾಚ್ಯುಟಿಯನ್ನು ಸರ್ಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಸಂಘಟನೆಯ ಮೀನಾಕ್ಷಿ, ವನಜಾಕ್ಷಿ, ಈರಮ್ಮ, ಕೆಂಪಮ್ಮ, ಲೀಲಾವತಿ. ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಾಜರಿದ್ದರು.