ದಕ್ಷಿಣ ಕ್ನನಡ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎಸ್.ವಿ.ಎಸ್. ಕಾಲೇಜು ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸಾತ್ (32) ಸ್ಥಳದಲ್ಲೇ ಸಾವನ್ನಪ್ಪಿದ್ದು, ಆದರ್ಶ್ ಎಂಬವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿರ್ಮಲಾ ಅನ್ಸಾತ್ ಹಾಗೂ ಆದರ್ಶ್ ಲಾರಿಯ ಹಿಂಬದಿಯಲ್ಲಿ ಅಕ್ಕಿ ಲೋಡ್ ಮೇಲೆ ಕುಳಿತುಕೊಂಡಿದ್ದರು. ಅಪಘಾತದ ವೇಳೆ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ನಿರ್ಮಲಾ ಅನ್ಸಾತ್ ಮೃತಪಟಟ್ಟಿದ್ದು, ಆದರ್ಶ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಲಾರಿ ಚಾಲಕ ಸುಜಿತ್ ಹಾಗೂ ಕ್ಲೀನರ್ ಸಿಮೋಹನ್ ಯಾವುದೇ ಗಾಯ ವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅವರು ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡುಬಿದಿರೆ ಮಾರ್ಗವಾಗಿ ಬಂಟ್ವಾಳಕ್ಕೆ ಬರುತ್ತಿದ್ದಾಗ, ಅತಿಯಾದ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಳ್ಳಕ್ಕೆ ಉರುಳಿಬಿದ್ದಿದೆ. ಇನ್ನು ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.