CHITRADURGA : ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮೂವರು ದುರ್ಮರಣ

ಚಿತ್ರದುರ್ಗ: 

ಟಿಟಿ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವಂತಹ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ನಡೆದಿದೆ. ಶಂಕರಿಬಾಯಿ(65), ಕುಮಾರ ನಾಯ್ಕ್(46) ಮತ್ತು ಶ್ವೇತಾ(38) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಐವರು ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ತಿಮ್ಮಣ್ಣನಹಳ್ಳಿಯ ಶಂಕರಿಬಾಯಿ (65), ಕುಮಾರನಾಯ್ಕ್ (46), ಶ್ವೇತಾ (38) ಎಂದು ಗುರುತಿಸಲಾಗಿದೆ. ಇನ್ನುಳಿದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆಗ್ಗೆರೆ ಗ್ರಾಮದ ಬಳಿ ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಟಿ ವಾಹನ ಪಲ್ಟಿಯಾಗಿದ್ದು, ಅದರಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.  ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಈ ಘಟನೆ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

Author:

share
No Reviews