ತವರಿಗೆ ಬಂದ ರೋಹಿತ್‌ ಶರ್ಮಾಗೆ ಭರ್ಜರಿ ಸ್ವಾಗತ

ರೋಹಿತ್‌ ಶರ್ಮಾ
ರೋಹಿತ್‌ ಶರ್ಮಾ
ಕ್ರಿಕೆಟ್‌

ನ್ಯೂಜಿಲೆಂಡ್ ವಿರುದ್ಧ ಸೆಣಸಾಡಿ ಚಾಂಪಿಯನ್ಸ್ ಟ್ರೋಫಿ ತಮ್ಮದಾಗಿಸಿಕೊಂಡ ಟೀಂ ಇಂಡಿಯಾ ಆಟಗಾರರು ತವರು ಸೇರಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡಿದೆ. 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಅದ್ಧೂರಿ ಸ್ವಾಗತ ದೊರೆಯಿತು. ನೆನ್ನೆ ರಾತ್ರಿ ಗಂಟೆಯ ಸುಮಾರಿಗೆ ರೋಹಿತ್ ಶರ್ಮಾ ಮುಂಬೈ ಏರ್‌ಪೋರ್ಟ್‌ಗೆ ಬಂದಿಳಿದರು. ಏರ್‌ಪೋರ್ಟ್‌ನಿಂದ ಹೊರ ಬರುತ್ತಲೇ ಅಭಿಮಾನಿಗಳತ್ತ ಕೈ ಬೀಸಿದ ರೋಹಿತ್ ನಗು ಮುಖದಿಂದ ತಮ್ಮ ಕಾರು ಹತ್ತಿದರು. ಇವರನ್ನು ಕಂಡು ಅಭಿಮಾನಿಗಳು ಘೋಷಣೆಗಳನ್ನು ಕೂಗಿ ಜೈಕಾರ ಹಾಕುವ ಮೂಲಕ ರೋಹಿತ್‌ ಶರ್ಮಾಗೆ ಭರ್ಜರಿ ಸ್ವಾಗತ ಕೋರಿದರು.  ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಗರಿಷ್ಠ ರನ್ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಶೇಷ ಸಾಧನೆಗೆ ಪಾತ್ರರಾದರು.

 

Author:

...
Sub Editor

ManyaSoft Admin

share
No Reviews