ಇಂಡಿಯನ್ ಪ್ರೀಮಿಯರ್ ಲೀಗ್ ನ 18ನೇ ಆವೃತ್ತಿಯು ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಅದಕ್ಕಾಗಿ ಎಲ್ಲಾ ತಂಡಗಳು ಸಿದ್ಧತೆ ಪ್ರಾರಂಭಿಸಿವೆ.ವಿರಾಟ್ ಕೊಹ್ಲಿ ಕೂಡ ಕೆಲವೇ ದಿನಗಳಲ್ಲಿ ಆರ್‌ಸಿಬಿ ಕ್ಯಾಂಪ್ ಸೇರಲಿದ್ದಾರೆ.ನಾಯಕ ರಜತ್ ಪಾಟಿದಾರ್ ಸೇರಿದಂತೆ ಹೆಚ್ಚಿನ ಆಟಗಾರರು ಆರ್‌ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ. ಇದರ ಮಧ್ಯೆ ಫ್ರಾಂಚೈಸಿ ತನ್ನ ಹೊಸ ಜೆರ್ಸಿಯನ್ನು ಅನಾವರಣ ಮಾಡಿದೆ. ಮಾರ್ಚ್ 17 ರಂದು ಆರ್‌ಸಿಬಿ ಅನ್ ಬಾಕ್ಸ್ ಈವೆಂಟ್ ಇದೆ. ಈ ಕಾರ್ಯಕ್ರಮಕ್ಕೂ ಮೊದಲೇ ಜರ್ಸಿಯನ್ನು ಬಿಡುಗಡೆ ಮಾಡಿದೆ. ತನ್ನ ಅಧಿಕೃತ ಟ್ವಿಟರ್ ಎಕ್ಸ್ ಖಾತೆಯಲ್ಲಿ ನೂತನ ನಾಯಕ ರಜತ್ ಪಾಟೀದಾರ್‌ಫೋಟೊ ಹಂಚಿಕೊಳ್ಳುವ ಮೂಲಕ ಈ ಸುಳಿವನ್ನು ನೀಡಿದ್ದಾರೆ. 2024ರಲ್ಲಿ, ಆರ್‌ಸಿಬಿ ಆಟಗಾರರು ತಮ್ಮ ಜೆರ್ಸಿಯ ಮೇಲೆ ಕೆಂಪು ಮತ್ತು ನೀಲಿ ಛಾಯೆಯನ್ನು ಬಳಸಿದ್ದರು.ಇದು ಅಭಿಮಾನಿಗಳಿಗೆ ಅಷ್ಟಾಗಿ ಇಷ್ಟವಾಗಿರಲಿಲ್ಲ. ಆದರೆ ಈ ಬಾರಿ, ಫ್ರಾಂಚೈಸಿ ಅಭಿಮಾನಿಗಳಿಗೆ ಇಷ್ಟವಾಗುವಂತ ಕಪ್ಪು ಮತ್ತು ಕೆಂಪು ಬಣ್ಣವನ್ನು ಬಳಸಿದಂತಿದೆ.
ರಜತ್ ಪಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ಮಾರ್ಚ್ 22 ರಂದು ಮೊದಲ ಪಂದ್ಯವನ್ನು ಆಡಲಿದೆ. ಕಳೆದ ವರ್ಷ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.ಈ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆಯಲಿದೆ. ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ,ರಜತ್ ಪಾಟೀದಾರ್, ಯಶ್ ದಯಾಳ್,ಜೋಶ್ ಹ್ಯಾಸಲ್ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮ, ಲಿಯಾಮ್ ಲಿವಿಂಗ್ಸ್ಟೋನ್, ರಸಿಕ್ ಸಲಾಂ, ಸುಯಶ್ ಶರ್ಮ, ಭುವನೇಶ್ವರ್ ಕುಮಾರ್,ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ನುವಾನ್ ತುಷಾರ, ರೊಮಾರಿಯೊ ಶೆರ್ಡ್, ಸ್ವಪ್ನಿಲ್ ಸಿಂಗ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕರ, ಮೋಹಿತ್ ರಾಥೀ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ ಇದ್ದಾರೆ.