ಸತತ ನಾಲ್ಕನೇ ಪಂದ್ಯ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್‌ ಪ್ರೀಮಿಯರ್ ಲೀಗ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 9 ವಿಕೆಟ್‌ನಿಂದ ಸೋಲಿಸಿದೆ. ಈ ಮೂಲಕ ತವರಿನಲ್ಲಿ ಆಡಿದ 4 ಪಂದ್ಯವನ್ನು ಆರ್‌ಸಿಬಿ ಸೋತಿದೆ.

ಪಂದ್ಯದಲ್ಲಿ ಟಾಸ್ಕ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 147 ರನ್‌ ಗಳಿಸಿ ಡೆಲ್ಲಿಗೆ 148 ರನ್‌ಗಳ ಗುರು ನೀಡಿತು. ಈ ಗುರಿಯನ್ನು ಬೆನ್ನೆಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌ 15.3 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 151 ರನ್‌ ಗಳಿಸುವ ಮೂಲಕ ಭರ್ಜರಿ ಜಯ ಸಾಧಿಸಿದೆ.  

ಆರ್‌ಸಿಬಿ ಪರ ಎಲಿಸ್ ಪೆರ್ರಿ ಮತ್ತೊಮ್ಮೆ ಮುಖ್ಯ ಪಾತ್ರವನ್ನು ನಿರ್ವಹಿಸಿ 47 ಎಸೆತಗಳಲ್ಲಿ ಮೂರು ಸಿಕ್ಸರ್‌ಗಳು ಮತ್ತು ಬೌಂಡರಿಗಳೊಂದಿಗೆ 60 ರನ್ ಗಳಿಸಿದರು. ಪೆರ್ರಿ ಈ ಆವೃತ್ತಿಯಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಈ ಋತುವಿನಲ್ಲಿ ಅವರು ಆರು ಪಂದ್ಯಗಳಲ್ಲಿ 98.33 ಸರಾಸರಿಯಲ್ಲಿ 295 ರನ್ ಗಳಿಸಿದ್ದಾರೆ.

 

Author:

...
Editor

ManyaSoft Admin

Ads in Post
share
No Reviews