IPL 2025: ಇಂದು ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿವೆ RR VS KKR

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 18ನೇ ಆವೃತ್ತಿಯ ಆರನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಈ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡಗಳು ಮುಖಾಮುಖಿಯಾಗುತ್ತಿವೆ. ಕೊನೆಯ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ 44 ರನ್ಗಳ ಸೂಲು ಕಂಡಿದ್ದು, ಕೆಕೆಆರ್‌ ತಂಡವು ಆರ್‌ಸಿಬಿ ವಿರುದ್ಧ 7 ವಿಕೆಟ್‌ಗಳ ಹಿನ್ನಡೆ ಅನಭವಿಸಿತು.

ರಾಜಸ್ಥಾನ ರಾಯಲ್ಸ್‌ ತಂಡದಲ್ಲಿ  ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್ (ನಾಯಕ), ನಿತೀಶ್ ರಾಣಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಫಜಲ್ಹಕ್ ಫಾರೂಕಿ, ಶಿವಂ ದುಬೆ, ಜೋಫ್ರಾ ಆರ್ಚರ್, ಮಹಿಷ್ ತೀಕ್ಷಣ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ ಇದ್ದಾರೆ.

ಇನ್ನು ಕೆಕೆಆರ್‌ ತಂಡದಲ್ಲಿ ಸುನಿಲ್ ನರೈನ್, ಕ್ವಿಂಟನ್ ಡಿ ಕಾಕ್, ಅಜಿಂಕ್ಯ ರಹಾನೆ (ನಾಯಕ), ಅಂಗ್ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ಅನ್ರಿಚ್ ನಾರ್ಕಿಯಾ, ವರುಣ್ ಚಕ್ರವರ್ತಿ  ಇದ್ದಾರೆ.

 

 

Author:

share
No Reviews