ಸಕಲೇಶಪುರ : ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪಿದ್ದರೆ, ಇನ್ನಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಎಂಬಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿವಾಸಿಗಳಾದ ಅಭಿಷೇಕ್ ಮತ್ತು ಶರತ್ ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ.
ಭಾರೀ ಮಳೆಯ ಕಾರಣದಿಂದ ರಸ್ತೆ ಸ್ಪಷ್ಟವಾಗಿ ಕಾಣದ ಹಿನ್ನೆಲೆಯಲ್ಲಿ ಎರ್ಟಿಗಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ನಾಲ್ವರು ಯುವಕರು ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇನ್ನು ಅಪಘಾತದ ತೀವ್ರತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಿಷಯ ತಿಳಿದು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.