Sandalwood : ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಈ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದವರು ಸೀಸ್ ಕಡ್ಡಿ ಸಿನಿಮಾ ಬಗೆಗಿನ ಒಂದಿಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ನಿರ್ದೇಶರಾದ ರತನ್ ಗಂಗಾಧರ್ ಅವರು ಮಾತಾನಾಡಿ ಸಿನಿಮಾ ಕಥೆಗೆ ಸ್ಫೂರ್ತಿಯಾದ ವಿಚಾರವನ್ನು ತೆರೆದಿಟ್ಟಿದ್ದಾರೆ. ಪುಸ್ತಕವೊಂದನ್ನು ಓದಿದಾಗ ಅದರಲ್ಲಿ ಪೆನ್ಸಿಲ್ ನ ನಾನಾ ಸೂಕ್ಷ್ಮಗಳ ವಿವರವಿತ್ತು. ಅದನ್ನು ಐದು ಪಾತ್ರಗಳನ್ನಾಗಿಸಿ, ಅದಕ್ಕೆ ಹೊಂದಿಕೊಂಡಂತೆ ಐದು ಕಥೆಗಳನ್ನು ಸೃಷ್ಟಿಸಿ, ಆ ಕಥೆಗಳೆಲ್ಲ ಒಂದು ಬಿಂದುವಿನಲ್ಲಿ ಸಂಧಿಸುವ ಅಚ್ಚರಿಯ ಸಾರವೇ ಸೀಸ್ ಕಡ್ಡಿಯ ಕಥೆ ಎಂದರು. ಈ ಚಿತ್ರದಲ್ಲಿ ಬೇರೆ ಬೇರೆ ಬಗೆಯ ಕನ್ನಡ ಭಾಷಾ ಶೈಲಿಗಳಿವೆ.
ಗ್ರಹಣ ಪ್ರೊಡಕ್ಷನ್ ಮೂಲಕ ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮತ್ತೋಬ್ಬ ನಿರ್ದೇಶಕ ಮಾತನಾಡಿ ಶ್ರೀನಿ, ಅವರು ಮಕ್ಕಳ ಮುಗ್ಧತೆಯನ್ನು ತಾಜಾತನದಿಂದ ಸೆರೆ ಹಿಡಿದು ದೃಶ್ಯವಾಗಿಸೋದೆ ನಿರ್ದೇಶನದ ನಿಜವಾದ ಸವಾಲು ಅದನ್ನು ಈ ಚಿತ್ರದಲ್ಲಿ ಸಮರ್ಥವಾಗಿ ಮಾಡಲಾಗಿದೆ ಎಂದು ಹಾಗೂ ಈ ಸಿನಿಮಾ ಗೆಲ್ಲಬೇಕು ಎಂದು ಶುಭಾಹಾರೈಸಿದ್ದಾರೆ.
ಪಪ್ಪಿ ಚಿತ್ರವು ಇತ್ತೀಚೆಗಷ್ಟೇ ಯಶಸ್ವಿಯನ್ನು ಕಂಡಿದ್ದು, ಇದರ ನಿರ್ದೇಶಕರಾದ ಆಯುಶ್ ಮಾತನಾಡಿ ತಮ್ಮ ಸಿನಿಮಾದಂತೆ ಸೀಸ್ ಕಡ್ಡಿ ಚಿತ್ರಕ್ಕೂ ಸಿಗಲಿ ಎಂದು ಅರಿಕೆ ಮಾಡಿಕೊಂಡಿದ್ದಾರೆ. ಗ್ರಹಣ ಎಲ್‌ಎಲ್‌ಪಿ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಚಿತ್ರಕ್ಕೆ ಸುನಿಲ್ ನರಸಿಂಹಮೂರ್ತಿ ಛಾಯಾಗ್ರಹಣ ಬಾಲಸಾರಂಗನ್ ಸಂಗೀತ ನಿರ್ದೇಶನ ಹಾಗೂ ಮುಂತಾದವರ ತಾರಾಗಣವಿರುವ ಈ ಚಿತ್ರ ಜೂನ್ 6 ರಂದು ತೆರೆಗಾಣಲಿದೆ