ವಿಜಯಪುರ : ವಿಜಯಪುರದಲ್ಲಿ ಮಹೇಂದ್ರ TUV, ಲಾರಿ, VRL ಬಸ್ ಮಧ್ಯೆ ಸರಣಿ ಅಪಘಾತ | 5 ಮಂದಿ ಸ್ಥಳದಲ್ಲೇ ದುರ್ಮರಣ

ವಿಜಯಪುರ : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 50 ರ ಚತುಷ್ಪಥ ರಸ್ತೆಯಲ್ಲಿ ಇಂದು  ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು, ಖಾಸಗಿ ಬಸ್ ಮತ್ತು ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಕಾರಿನಲ್ಲಿದ್ದವರು ಹಾಗೂ ಖಾಸಗಿ ಬಸ್‌ನಲ್ಲಿದ್ದ ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ ಖಾಸಗಿ ಬಸ್‌ನ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂಟೇನರ್‌ನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ.

ಇನ್ನು ಅಪಘಾತದ ಸ್ಥಳಕ್ಕೆ ಮನಗೂಳಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ, ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. 

 

Author:

...
Keerthana J

Copy Editor

prajashakthi tv

share
No Reviews