ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಎಚ್ .ಗಿರಿಗೌಡ, ಜಿಲ್ಲಾಧ್ಯಕ್ಷ ಎನ್.ನರಸಿಂಹರಾಜು, ಡಾ.ಚೌದ್ರಿ ನಾಗೇಶ್, ಇ.ಓ ಶಿವರಾಜಯ್ಯ, ಬಿಇಒ ಸೋಮಶೇಖರ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶಿವಯ್ಯ, ನೌಕರರ ಸಂಘದ ಮಾಜಿ ಅಧ್ಯಕ್ಷರುಗಳು, ಜಿಲ್ಲೆಯ ವಿವಿಧ ತಾಲೂಕಿನ ನೌಕರ ಸಂಘದ ಅಧ್ಯಕ್ಷರುಗಳು ಹಲವು ಭಾಗಿಯಾಗಿದ್ರು.
ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಷಡಕ್ಷರಿ, ರಾಜ್ಯದ ಸರ್ಕಾರಿ ನೌಕರರಿಗೆ ಅತ್ಯಗತ್ಯವಾಗಿ ಬೇಕಿರುವ ಹಳೆ ಪಿಂಚಣಿ ವ್ಯವಸ್ಥೆ ಮತ್ತು ನಗದು ರಹಿತ ಆರೋಗ್ಯ ಚಿಕಿತ್ಸೆಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕೆಂದು ಆಗ್ರಹಿಸಿದ್ರು. ಅಲ್ದೇ ಹಳೇ ಪಿಂಚಣಿ ಜಾರಿಗೊಳಿಸಲು ತಾವು ಪ್ರಾಮಾಣಿಕವಾಗಿ ಪ್ರಯತ್ನ ಮಾಡವುದಾಗಿ ಹೇಳಿದರು. ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ,ಕೇಂದ್ರ ಮಾದರಿಯಲ್ಲಿ ವೇತನ ಜಾರಿ ಹಾಗು ಶಿಕ್ಷಕರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಿಕೊಡುವುದಾಗಿ ಹೇಳಿದರು.
ಇನ್ನು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಂ ಟಿ ಕೃಷ್ಣಪ್ಪ ತಾವು ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿದ್ದ ಕಾಲದಿಂದಲೂ ಸಹ ನೌಕರರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿದ್ದೇನೆ ಎಂದರು. ತಾಲೂಕು ಅಧ್ಯಕ್ಷ ಡಾ.ನವೀನ್ ನೇತೃತ್ವದ ತಾಲ್ಲೂಕು ನೌಕರರ ಸಂಘ ಬಹಳ ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಇನ್ನು ಇದೇ ಸಂದರ್ಭದಲ್ಲಿ ತಾಲ್ಲೂಕು ನೌಕರರ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ, ಹಾಗೂ ನೃತ್ಯ ಮಾಡಿದ ನೌಕರರಿಗೆ ಪ್ರಮಾಣಪತ್ರ ಹಾಗೂ ಪದಕಗಳನ್ನು ನೀಡಿ ಗೌರವಿಸಲಾಯಿತು.