ದೇಶ:
ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ದಮನಕ್ಕೆ ಭಾರತ ಸೇನೆಯು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಆರಂಭಿಸಿ ಪಾಕ್‌ನ ಮಟ್ಟಹಾಕಲು ಸಿದ್ಧತೆ ನಡೆಸಿದೆ. ನಿನ್ನೆ ರಾಜ್ಯದ ಸರ್ಕಾರಿ ನೌಕರರು ಎಂದಿನಂತೆ ಕೆಲಸಕ್ಕೆ ಹಾಜರಾಗಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಶುಕ್ರವಾರ ರಾತ್ರಿ ಪಾಕ್ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸರ್ಕಾರದ ಹಿರಿಯ ಅಧಿಕಾರಿ ಸೇರಿ ಐವರು ಸಾವನ್ನಪ್ಪಿದ್ದಾರೆ.
ಹೌದು, ಉಭಯ ದೇಶಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಇದರ ಬೆನ್ನಲ್ಲೇ ಪಾಕ್ ಸೇನೆಯು ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್ ವರೆಗೆ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಶುಕ್ರವಾರ ರಾತ್ರಿ ಮತ್ತೆ ಡ್ರೋನ್ ದಾಳಿ ನಡೆಸಿತ್ತು. ವಿಮಾನ ನಿಲ್ದಾಣಗಳು ಮತ್ತು ವಾಯುನೆಲೆಗಳು ಸೇರಿದಂತೆ ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿದ ಪಾಕಿಸ್ತಾನದ ಡ್ರೋನ್ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು.
ಆದರೆ, ಇಂದು ಮುಂಜಾನೆ ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿ ಸೇರಿದಂತೆ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.