ಶಿವಮೊಗ್ಗ: ಕಾರುಗಳ ನಡುವೆ ಭೀಕರ ಅಪಘಾತ | ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

ಎರಡು ಕಾರುಗಳು ಅಪಘಾತದ ತೀವ್ರತೆಗೆ ನಜ್ಜು ಗುಜ್ಜಾಗಿರುವುದು.
ಎರಡು ಕಾರುಗಳು ಅಪಘಾತದ ತೀವ್ರತೆಗೆ ನಜ್ಜು ಗುಜ್ಜಾಗಿರುವುದು.
ಶಿವಮೊಗ್ಗ

ಶಿವಮೊಗ್ಗ:

ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಂಗಳವಾರ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಪಘಾತದಿಂದ ಪಾರಾಗಿದ್ದಾರೆ. 

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಬಳಿ ಮಣಿಪಾಲದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಶಿವಮೊಗ್ಗದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಬೆಜ್ಜವಳ್ಳಿಯ ಅಯ್ಯಪ್ಪಸ್ವಾಮಿಯ ದೇವಸ್ಥಾನದ ಬಳಿ ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ. ಅಪಘಾತದ ತೀವ್ರತೆಗೆ ಎರಡು ಕಾರುಗಳು ನಜ್ಜುಗುಜ್ಜಾಗಿದ್ದು, ಸದ್ಯ ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ್ಯ ರೀತಿಯಲ್ಲಿ ಅಪಘಾತದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಾಹಾನಿಗಳಾಗಿಲ್ಲ ಎಂದು ತಿಳಿದು ಬಂದಿದೆ.

ಮಾಳೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

 

Author:

share
No Reviews