ಶಿರಾ : 11 ವರ್ಷದ ಬಳಿಕ ಹಿರೇಕೊನ್ನಲ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

ಶಿರಾ : 

ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಚಿಕ್ಕ ತಿಮ್ಮನಹಳ್ಳಿ ಗ್ರಾಮದಲ್ಲಿ ಹಿರೇಕೊನ್ನಲ ಕರಿಯಮ್ಮ ಜಾತ್ರಾ ಮಹೋತ್ಸವ ಸುಮಾರು 11 ವರ್ಷಗಳ ಬಳಿಕ ಸಪ್ತ ಗ್ರಾಮಗಳ ಸಹಯೋಗದಿಂದ ಸುಮಾರು ಐದು ದಿನಗಳ ಕಾಲ ಅತ್ಯಂತ ಸಂಭ್ರಮದಿಂದ ನಡೆಯಿತು. ಪ್ರತಿನಿತ್ಯ ಒಂದೊಂದು ಕಾರ್ಯಕ್ರಮ, ಪೂಜಾ ಕೈಂಕರ್ಯಗಳನ್ನು ನಡೆಸುವ ಮೂಲಕ ಅತ್ಯಂತ ಅದ್ದೂರಿಯಾಗಿ ನಡೆಸಲಾಯಿತು. ಜಾತ್ರೆಯ ಪ್ರಯುಕ್ತ ಚಿಕ್ಕ ತಿಮ್ಮನಹಳ್ಳಿ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಠಿಸಿತ್ತು.

ಇನ್ನು ಈ ಜಾತ್ರಾ ಮಹೋತ್ಸವದಲ್ಲಿ ಪ್ರಥಮ ಬಾರಿಗೆ ಮೊದಲನೇ ವರ್ಷದ ಬ್ರಹ್ಮ ರಥೋತ್ಸವ ಆಚರಣೆ ಮಾಡಲಾಯಿತು. ಎಲ್ಲಾ ಗ್ರಾಮಗಳ ಗೌಡರು, ಶಾನುಭೋಗರು ಹಾಗೂ 12 ಕೈವಾಡದವರು ಸೇರಿ ಈ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಿದರು. ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತಾದಿಗಳು ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ತಾಯಿ ಕೃಪೆಗೆ ಪಾತ್ರರಾದರು.

ಗ್ರಾಮದಲ್ಲಿ ದೇವಿಯು ಮೆರವಣಿಗೆಯು ಪ್ರತಿ ಮನೆಯನ್ನು ತಲುಪಿದ್ದು, ದೇವಿಗೆ ಆರತಿ ಮಾಡಿ ಭಕ್ತಿ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸಂಸದ ಗೋವಿಂದ ಕಾರಜೋಳ ಸೇರಿದಂತೆ ತುಮಕೂರಿನ ಗ್ರಾಮಾಂತರ ಶಾಸಕ ಸುರೇಶ್ ಗೌಡ. ತಾಲೂಕಿನ ವಿವಿಧ ರಾಜಕೀಯ ಪಕ್ಷಗಳು ಮುಖಂಡರು, ಹಾಗೂ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 

 

Author:

...
Sushmitha N

Copy Editor

prajashakthi tv

share
No Reviews