ಶಿರಾ:
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಶಿರಾ ತಾಲೂಕಿನ ದೇವರಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.
ತಾಲೂಕಿನ ಮದ್ದನಾಯಕನಹಳ್ಳಿ ಗ್ರಾಮಕ್ಕೆ ಸೇರಿದವರ ಕಾರು ಎನ್ನಲಾಗಿದ್ದು, ಅವರೆಲ್ಲರೂ ಶಿರಾ ಕಡೆಯಿಂದ ತಾವರೆ ಕೆರೆ ಕಡೆ ಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಸುಟ್ಟ ವಾಸನೆ ಬಂದಿದೆ, ಇದನ್ನು ಗಮನಿಸಿದ ತಕ್ಷಣವೇ ಕಾರು ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಆದರೆ ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಗೆಗ ಕಾರು ಹೊತ್ತಿ ಉರಿದಿದೆ. ಸದ್ಯ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿದ ಕೂಡಲೇ ಅಗ್ನಿ ಶಾಮಕದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.