ಶಿರಾ:
ಶಿರಾ ನಗರದ ಮಂಜು ಶ್ರೀ ಇಂಗ್ಲೀಷ್ ಸ್ಕೂಲ್‌ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ವಸ್ತು ಪ್ರದರ್ಶನವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಉದ್ಘಾಟಿಸಿದರು. ಈ ವೇಳೆ ಈ ಇ ಸಿ ಓ ಕರಿಯಣ್ಣ, ಸಂಸ್ಥೆಯ ಮುಖ್ಯಸ್ಥ ಮಹಾಲಿಂಗಪ್ಪ, ಶಾಲಾ ಶಿಕ್ಷಕರುಗಳು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವಿಜ್ಞಾನ ಪ್ರದರ್ಶನದಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದು, ಮಕ್ಕಳ ಪ್ರತಿಭೆಗೆ ಶಿಕ್ಷಣಾಧಿಕಾರಿ ಕೃಷ್ಣಪ್ಪ ಫಿದಾ ಆದರು. ಈ ವೇಳೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಮಕ್ಕಳು ಓದುವುದಕ್ಕೆ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ, ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೋಳ್ಳುವುದು ಅಗತ್ಯ ಎಂದರು.