ಶಿರಾ:
ಶಿರಾ ತಾಲೂಕಿನ ಕರಿದಾಸರಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದಿದ್ದು ನಿತ್ಯ ಭಯದಲ್ಲೇ ಜೀವನ ಮಾಡುವಂತಾಗಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಗಳು ಅವ್ಯವಸ್ಥೆಯಿಂದ ಕೂಡಿದ್ದು, ಜೋತು ಬಿದ್ದಿವೆ. ಇದರಿಂದ ಅದ್ಯಾವ ತಂತಿ ಕೆಳಗೆ ಬಿದ್ದು ಪ್ರಾಣ ಹೋಗುತ್ತೋ ಎಂಬ ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.
ಇನ್ನು ಗ್ರಾಮದ ಕೆಲವೊಂದು ಮನೆಗಳ ಮೇಲೆ ಕೂಡ ವಿದ್ಯುತ್ ತಂತಿ ಹಾದುಹೋಗಿದ್ದು, ಅವುಗಳು ಜೋತುಬಿದ್ದಿದ್ದು ಜೀವಕ್ಕೆ ಅಪಾಯ ಉಂಟು ಮಾಡುವ ಭೀತಿ ಕಾಡುತ್ತಿದೆ. ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಇನ್ನಾದರೂ ಬೆಸ್ಕಾಂ ಇಲಾಖೆ ಅಮಾಯಕ ಜೀವಗಳು ಬಲಿಯಾಗುವ ಮುನ್ನ ಎಚ್ಚೆತ್ತುಕೊಂಡು ಜೋತು ಬಿದ್ದ ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಡಬೇಕಿದೆ.