ಶಿರಾ :
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ದಂಪತಿ ಸಾವನ್ನಪ್ಪಿದರು. ಮೃತರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ರುದ್ರಾಪುರ ಗ್ರಾಮದ ನಿವಾಸಿಗಳಾಗಿದ್ದು ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಸಾವನ್ನಪ್ಪಿದರು. ಇನ್ನು ಅಪಘಾತಕ್ಕೆ ಅವೈಜ್ಞಾನಿಕವಾಗಿ ಉಬ್ಬು ಹಾಕಿರುವ ಕಾರಣ ಅಪಘಾತ ಸಂಭವಿಸಿದೆ. ಎಂದು ಆರೋಪಿಸಿ ಶವಗಾರದ ಮುಂದೆ ಮೃತದೇಹಳನ್ನು ಇರಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಗುತ್ತಿಗೆದಾರರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಮುಂದಿನ ದಿನಗಳಲ್ಲಿ ಸಮಸ್ಯೆಗೆ ಪರಿಹರಿಸದಿದ್ದಲ್ಲಿ ಮುಂದೆ ಇನ್ನಷ್ಟು ಉಗ್ರರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಇನ್ನು ಪ್ರತಿಭಟನಾ ಸ್ಥಳಕ್ಕೆ ತುಮುಲ್ ಸದಸ್ಯ ಎಸ್. ಅರ್ ಗೌಡ ಭೇಟಿ ನೀಡಿ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡರು. ಅಲ್ಲದೇ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಕ್ರಮ ಕೈಗೊಂಡ ಬಳಿಕ ಮೃತದೇಹಗಳನ್ನು ಕುಟುಂಬಸ್ಥರು ಸ್ವಗ್ರಾಮಕ್ಕೆ ಅಂತ್ಯಸಂಸ್ಕಾರಕ್ಕೆಂದು ತೆಗೆದುಕೊಂಡು ಹೋದರು.