ಶಿರಾ:
ಪ್ರಜಾಶಕ್ತಿ ಟಿವಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದ್ದು, ಅಧಿಕಾರಿಗಳ, ಶಾಸಕರ ಕಣ್ಣು ತೆರೆಸುವ ಕೆಲಸವನ್ನು ಮಾಡ್ತಿದೆ. ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಸಾಕ್ಷಿಹಳ್ಳಿ ಗ್ರಾಮದಿಂದ ತುಮಕೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ತುಂಬಾ ಗುಂಡಿಗಳು ಬಿದ್ದಿದ್ದು, ಸವಾರರು ಈ ಗುಂಡಿಗಳಲ್ಲಿ ಬಿದ್ದು ಕೈಕಾಲು ಮುರಿದುಕೊಳ್ಳುತ್ತಿದ್ದರು. ಈ ಬಗ್ಗೆ ನಿಮ್ಮ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು. ಈ ಬಗ್ಗೆ ಶಾಸಕ ಟಿ.ಬಿ ಜಯಚಂದ್ರ ಗಮನಕ್ಕೆ ಬಂದಿದ್ದು, ರಸ್ತೆ ಅಭಿವೃದ್ಧಿಗೆ ಸುಮಾರು 5 ಕೋಟಿ ಹಣ ಮೀಸಲಿಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹೌದು ಶನಿವಾರ ಸಾಕ್ಷಿಹಳ್ಳಿ ಗ್ರಾಮದ ರಸ್ತೆಗೆ ಪ್ರಜಾಶಕ್ತಿಯಲ್ಲಿ ವರದಿ ಬಿತ್ತರವಾಗಿತ್ತು. ಬುಕ್ಕಾಪಟ್ಟಣ ಹೋಬಳಿ ಶಿರಾ ತಾಲ್ಲೂಕಿಗೆ ಸೇರಿದ್ದರೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟಿದೆ. ಆದ್ದರಿಂದ ಎರಡು ಕ್ಷೇತ್ರದ ಶಾಸಕರು ಈ ಹೋಬಳಿಯನ್ನು ಮೂಲೆಗುಂಪು ಮಾಡಿದ್ದು, ರಸ್ತೆಯ ದುಸ್ಥಿತಿ ಹೇಳತೀರದಾಗಿತ್ತು. ಸವಾರರು ಈ ರಸ್ತೆಯಲ್ಲಿ ಹಳ್ಳಕ್ಕೆ ಇಳಿಸದೇ ಪ್ರಯಾಣ ಮಾಡುವುದೇ ದೊಡ್ಡ ಸವಾಲಿನ ಕೆಲಸವಾಗಿತ್ತು. ಈ ಹಳ್ಳ ತುಂಬಿದ ರಸ್ತೆಗಳಿಂದ ಸವಾರರು ಹೈರಾಣಾಗಿದ್ದರು. ಈ ರಸ್ತೆಯನ್ನು ಸರಿಪಡಿಸುವ ಕೆಲಸವನ್ನು ಅಧಿಕಾರಿಗಳು ಮಾತ್ರ ಮಾಡ್ತಾ ಇರಲಿಲ್ಲ.
ನಿನ್ನೆ ಬುಕ್ಕಾಪಟ್ಟಣ ಹೋಬಳಿಯ ಸಾಕ್ಷಿಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯ ಸ್ವಾಮಿ ನೂತನ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಟಿ.ಬಿ ಜಯಚಂದ್ರ ಭಾಗವಹಿಸಿದ್ದರು. ಈ ವೇಳೆ ರಸ್ತೆ ಹಾಳಾಗಿರುವುದರ ಕುರಿತು ಖುದ್ದು ಶಾಸಕರು ಪ್ರಯಾಣಿಸಿ ಅಲ್ಲಿನ ಸ್ಥಿತಿಯನ್ನು ಕಣ್ಣಾರೆ ಕಂಡರು. ಕೂಡಲೇ ಸ್ಥಳದಲ್ಲೇ ಉನ್ನತ ಅಧಿಕಾರಿಗಳಿಗೆ ಕರೆ ಮಾಡಿ ತಾವರೆಕೆರೆ-ಶಾಖದಡು-ಹುಯಿಲ್ ದೊರೆ-ಮಾರ್ಗನಹಳ್ಳಿ ರಸ್ತೆ ಅಭಿವೃದ್ಧಿಗೆ ಸುಮಾರು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.