ಶಿರಾ:
ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳ ಸ್ಥಿತಿ ಚಿಂತಾಜನಕವಾಗಿದ್ದು, ಬಹುತೇಕ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಬೇಕಿದೆ. ಕೆಲವೊಂದು ಶಾಲೆಗಳಲ್ಲಿ ಕಟ್ಟಡದ ಸಮಸ್ಯೆ ಇದ್ದರೆ ಇನ್ನು ಕೆಲ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗಿದ್ದು ಮಕ್ಕಳ ವಿದ್ಯಾಬ್ಯಾಸಕ್ಕೆ ತೊಂದರೆ ಆಗ್ತಿದೆ. ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿ ವ್ಯಾಪ್ತಿಯ ಕರಿದಾಸರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗಿದ್ದು ಮಕ್ಕಳ ಭವಿಷ್ಯ ಅಯೋಮಯವಾಗಿದೆ. ಇಲ್ಲಿನ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗಿದ್ದು, ಗಡಿ ಭಾಗದ ಶಾಲೆಗಳಿಗೆ ಒತ್ತಾಯ ಪೂರ್ವಕವಾಗಿ ಶಿಕ್ಷಕರು ಬಂದರೂ ಒಂದೆರಡು ವರ್ಷಗಳಲ್ಲಿ ಮತ್ತೆ ಟ್ರಾನ್ಸ ಫರ್ ಮಾಡಿಕೊಂಡು ಹೋಗ್ತಾ ಇರೋದರಿಂದ ಮತ್ತೆ ಶಿಕ್ಷಕರ ಕೊರತೆ ಹೆಚ್ಚಾಗಲಿದೆ.
ಕರಿದಾಸರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗಿದ್ದಾರೆ. ಒಟ್ಟು ಈ ಶಾಲೆಯಲ್ಲಿ 62 ವಿದ್ಯಾರ್ಥಿಗಳು ಮಾತ್ರ ಇದ್ದು ಶಿಕ್ಷಕರ ಕೊರತೆ ಹೆಚ್ಚಾಗಿದೆ. ಇದರಿಂದ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಆದರೆ ಆ ಶಿಕ್ಷಕರನ್ನು ಖಾಯಂ ನೇಮಕಾತಿ ಮಾಡಿಕೊಂಡಿಲ್ಲ. ಇದರಿಂದ ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗ್ತಿದೆ. ಕೂಡಲೇ ಈ ಬಗ್ಗೆ ಸರ್ಕಾರ ಎಚ್ಚೆತ್ತುಕೊಂಡು ಕೂಡಲೇ ಶಿಕ್ಷಕರನ್ನು ನೇಮಕ ಮಾಡಿಕೊಂಡು ಮಕ್ಕಳ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡಬೇಕಿದೆ.