ಶಿರಾ ನಗರದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆತುಮಕೂರು
ಶಿರಾ:
ಶಿರಾ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಶಾಸಕ ಜಯಚಂದ್ರ, ತಹಶೀಲ್ದಾರ್ ಸಚ್ಚಿದಾನಂದ ಕೂಚನೂರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಹಾಗೂ ಶಾಲಾ ಮಕ್ಕಳ ಪಥಸಂಚಲನ ನಡೆಸಿದ್ದು, ಗೌರವ ವಂದನೆ ಸಲ್ಲಿಸಿದರು. ಅಲ್ಲದೇ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಅಂಡ್ ಗೈಡ್ಸ್ ತಂಡಗಳಿಂದ ಆಕರ್ಷಕ ಪಥಸಂಚಲನ ಹಾಗು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಜನರ ಗಮನ ಸೆಳೆದವು. ಇನ್ನು ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತರಾದ ರುದ್ರೇಶ್. ಕೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಆರ್, ಡಿವೈಎಸ್‌ಪಿ ಬಿ,.ಕೆ ಶೇಖರ್ ಸೇರಿ ಹಲವಾರು ಮಂದಿ ಭಾಗಿಯಾಗಿದ್ದರು.
ಇನ್ನು ಗಣರಾಜ್ಯೋತ್ಸವ ಸಮಾರಂಭದಲ್ಲಿ ನಿರ್ವಹಣೆಯ ಕೊರತೆಯಿಂದಾಗಿ ಐ ಮ್ಯಾಕ್ಸ್ ದೀಪ ಹಗಲಲ್ಲೂ ಉರಿಯುತ್ತಿರೋದು ಗಮನಕ್ಕೆ ಬಂದಿದೆ. ವಿದ್ಯುತ್ ಪೋಲು ತಡೆಗೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೆ, ನಿರ್ವಹಣೆ ಕೊರತೆಯಿಂದಾಗಿ ಒಂದು ತಿಂಗಳಿನಿಂದಲೂ ಈ ಐ ಮ್ಯಾಕ್ಸ್ ದೀಪಗಳು ಹಗಲು ಹೊತ್ತಿನಲ್ಲೂ ಉರಿಯುತ್ತಿವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ.