ಕೊರಟಗೆರೆ: ಕೊರಟಗೆರೆ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಆಯ್ಕೆ

ನೂತನ ಅಧ್ಯಕ್ಷರಾಗಿ ಆಯ್ಕೆಯಾದ‌ ಜಿ.ಎಂ ಶಿವಾನಂದ್ ಅವರಿಗೆ ಪಕ್ಷದ ಮುಖಂಡರು ಹಾರ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ‌ ಜಿ.ಎಂ ಶಿವಾನಂದ್ ಅವರಿಗೆ ಪಕ್ಷದ ಮುಖಂಡರು ಹಾರ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.
ತುಮಕೂರು

ಕೊರಟಗೆರೆ:

ಕೊರಟಗೆರೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಎಂ ಶಿವಾನಂದ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರ ಸ್ಥಾನ ತೆರವು ಆಗಿದ್ದ ಕಾರಣ ಚುನಾವಣೆ ನಡೆಸಲಾಯಿತು, ಅಧ್ಯಕ್ಷ ಸ್ಥಾನಕ್ಕೆ ಜಿ.ಎಂ ಶಿವಾನಂದ ಹೊರತುಪಡಿಸಿ ಯಾರು ಕೂಡ  ಚುನಾವಣೆಯಲ್ಲಿ ಸ್ಪರ್ಧಿಸಿದ ಕಾರಣ  ಅವಿರೋಧವಾಗಿ ಶಿವಾನಂದ್‌ ಅವರು ಆಯ್ಕೆಯಾದರು. ನೂತನ ಅಧ್ಯಕ್ಷರಿಗೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು  ಹಾರ ಹಾಕಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಅರಕೆರೆ ಶಂಕರ್, ಅಶ್ವಥ್ ನಾರಾಯಣ್, ಪಟ್ಟಣ ಪಂಚಾಯಿತಿ ಸದಸ್ಯರಾದ ಎ.ಡಿ ಬಲರಾಮಯ್ಯ  ಮುಖಂಡರಾದ ಮಹಾಲಿಂಗಪ್ಪ, ವಿ ಎಸ್ ಎಸ್ ಎನ್ ಅಧ್ಯಕ್ಷರಾದ  ವಿನಯ್ ಕುಮಾರ್ ಸೇರಿ ಹಲವರು ಭಾಗಿಯಾಗಿದ್ದರು.

ಈ ವೇಳೆ ನೂತನ ಅಧ್ಯಕ್ಷ ಶಿವಾನಂದ್‌ ಮಾತನಾಡಿ, ಗೃಹ ಸಚಿವ ಪರಮೇಶ್ವರ್‌ ಸೂಚನೆಯಂತೆ ಚುನಾವಣೆ ನಡೆದಿದ್ದು. ಅಧ್ಯಕ್ಷರಾಗಿ ಆಯ್ಕೆ ಮಾಡಿದ ಎಲ್ಲರಿಗೂ ಅಭಿನಂದನೆಗಳು. ತೆರಿಗೆ ಅನುಕೂಲವಾಗುವ ಕೆಲಸಗಳನ್ನು ಮಾಡುತ್ತಾ  ಸಹಕಾರ ಸಂಘವನ್ನು ಎಲ್ಲ ಸದಸ್ಯರ ಒಟ್ಟುಗೂಡಿ ಮತ್ತಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು.

Author:

...
Editor

ManyaSoft Admin

Ads in Post
share
No Reviews