ಕನ್ನಡದ ಸೂಪರ್ಸ್ಟಾರ್ ಶಿವರಾಜ್ಕುಮಾರ್ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ನಟ ಶಿವರಾಜ ಕುಮಾರ್ ಚೇತರಿಸಿಕೊಂಡಿದ್ದು, ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.ನಿನ್ನೆ ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಯರ ದರ್ಶನ ಪಡೆದಿದ್ದಾರೆ. ವಿಶ್ರಾಂತಿಯಲ್ಲಿರುವ ಶಿವಣ್ಣ ಶೂಟಿಂಗ್ನಿಂದ ಬಿಡುವು ಪಡೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿವಣ್ಣನ ಜೊತೆ ಪತ್ನಿ ಗೀತಾ ಶಿವರಾಜ್ಕುಮಾರ್, ಪುತ್ರಿ ನಿವೇದಿತಾ ಕೂಡ ರಾಯರ ದರ್ಶನ ಮಾಡಿದ್ದಾರೆ. ಡಾ.ರಾಜ್ ಕುಮಾರ್ ಕುಟುಂಬ ಮೊದಲಿನಿಂದಲೂ ಗುರು ರಾಘವೇಂದ್ರ ಸ್ವಾಮಿಯನ್ನು ಆರಾಧಿಸುತ್ತಲೇ ಬಂದಿದೆ.
ಇನ್ನು ಕೆಲವೇ ದಿನಗಳಲ್ಲಿ ಶಿವಣ್ಣ ಚಿತ್ರೀಕರಣಕ್ಕೆ ಮರಳಲಿದ್ದಾರೆ.ಈಗಾಗಲೇ ಬಿರುಸಿನ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸದ್ಯಕ್ಕೆ 45 ಸಿನಿಮಾ ಕೊನೆಯ ಹಂತದ ವರ್ಕ್ನಲ್ಲಿದೆ. ಇತ್ತೀಚೆಗೆ ಶಿವಣ್ಣಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಹೀಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್ ಕುಮಾರ್ ಚಿಕಿತ್ಸೆ ಪಡೆದು ವಾಪಸ್ ತವರಿಗೆ ತೆರಳಿದ್ದಾರೆ. ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆಯ ನಂತರ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.