2025-26ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿಮಾ ಪ್ರಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಿಗೆ ಏಕರೂಪ ದರ ನಿಗದಿ ಪಡಿಸೋ ಮಹತ್ವದ ನಿರ್ಧಾರ ವನ್ನು ಕೈಗೊಂಡಿದೆ. . ಕರ್ನಾಟಕದ ಸಿನಿಮಾ ಪ್ರೇಮಿಗಳ ಬಹುವರ್ಷದ ಬೇಡಿಕೆ ಆಗಿದ್ದ ಮಲ್ಟಿಪ್ಲೆಕ್ಸ್ ಟಿಕೆಟ್ ದರ ನಿಯಂತ್ರಣ ಮಾಡುವ ಬೇಡಿಕೆಗೆ ಸರ್ಕಾರ ಅಸ್ತು ಎಂದಿದೆ. ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನಲ್ಲಿ ಮಲ್ಟಿಪ್ಲೆಕ್ಸ್ ಟಿಕೆಟ್ ದರಗಳನ್ನು 200 ರೂಪಾಯಿಗೆ ನಿಗದಿಪಡಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಮಲ್ಟಿಪ್ಲೆಕ್ಸ್‌ಗಳು ದುಬಾರಿ ಟಿಕೆಟ್ ದರ ನಿಗದಿಪಡಿಸುತ್ತಿದ್ದವು. ಈಗ ಮಲ್ಟಿಪ್ಲೆಕ್ಸ್‌ಗಳ ದರ ಏರಿಕೆಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಇನ್ನು ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ 200 ಗಳಿಗಿಂತ ಹೆಚ್ಚು ಮಾಡುವಂತಿಲ್ಲ.
ಕೆಲ ತಿಂಗಳ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಸಹ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಲ್ಟಿಪ್ಲೆಕ್ಸ್ ಟಿಕೆಟ್ ದರ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಆಗ ಭರವಸೆ ನೀಡಿದ್ದ ಸಿದ್ದರಾಮಯ್ಯ ಅವರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಆಗಲೂ ಸಹ ಸಿದ್ದರಾಮಯ್ಯ ಅವರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಅದರಂತೆ ಇಂದು ಬಜೆಟ್‌ನಲ್ಲಿ ಮಲ್ಟಿಪ್ಲೆಕ್ಸ್ ಟಿಕೆಟ್ ದರದ ಮೇಲೆ ನಿಯಂತ್ರಣ ಹೇರಿದ್ದಾರೆ.