ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ಎ.ಆರ್ ರೆಹಮಾನ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚಿಗೆ ರೆಹಮಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಎ.ಆರ್ ರೆಹಮಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎದೆನೋವಿನ ಹಿನ್ನೆಲೆಯಲ್ಲಿ ಎ.ಆರ್ ರೆಹಮಾನ್ ಅವರಿಗೆ ECG, ಎಕೋಕಾರ್ಡಿಯೋಗ್ರಾಮ್ ಸೇರಿ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ಸದ್ಯಕ್ಕೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಚಿಕಿತ್ಸೆ ನೀಡುತ್ತಿರುವ ವೈದ್ಯರು ರೆಹಮಾನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಾಧ್ಯತೆ ಇದೆ.
ಎಆರ್ ರೆಹಮಾನ್ ಅವರಿಗೆ ಈಗ 58 ವರ್ಷ ವಯಸ್ಸಾಗಿದೆ. ಇತ್ತೀಚೆಗಷ್ಟೆ ಅವರು ಪತ್ನಿ ಸಾಯಿರಾ ಬಾನು ಅವರಿಂದ ದೂರಾಗಿದ್ದಾರೆ. ಪತ್ನಿಯಿಂದ ವಿಚ್ಛೇದನ ಪಡೆದಿರುವ ಎಆರ್ ರೆಹಮಾನ್ ಏಕಾಂಗಿಯಾಗಿದ್ದಾರೆ. ಅಂದಹಾಗೆ ರೆಹಮಾನ್ ಅವರಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ರೆಹಮಾನ್ ಪುತ್ರ ಮತ್ತು ಪುತ್ರಿ ಇಬ್ಬರೂ ಸಹ ಗಾಯಕರೇ ಆಗಿದ್ದಾರೆ. ಸುಮಾರು 29 ವರ್ಷಗಳ ದಾಂಪತ್ಯಕ್ಕೆ ಕಳೆದ ವರ್ಷ ನವೆಂಬರ್‌ನಲ್ಲಿ ಸೈರಾ ಬಾನು ಮತ್ತು ಎಆರ್ ರೆಹಮಾನ್ ಅಂತ್ಯ ಹಾಡಿದ್ದರು. ಇಬ್ಬರೂ ಡಿವೋರ್ಸ್ ಪಡೆದಿದ್ದರು.