SIRA- ಸೈಬರ್ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ಅಪರಾದ ತಡೆಗಟ್ಟುವಲ್ಲಿ ಸಾರ್ವಜನಿಕ ಪಾತ್ರ ಬಹು ಮುಖ್ಯವಾದದ್ದು.

ಶಿರಾ  ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಇತ್ತೀಚಿನ ಕಳ್ಳತನಗಳು ಸರಗಳ್ಳತನಗಳು ಮತ್ತು ಸೈಬರ್ ಕ್ರೈಂ ಗಳ ಬಗ್ಗೆ ಹಾಗೂ ವಿವಿಧ ಅಪರಾಧಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು . ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್‌ ಕ್ರೈಂ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಕಳ್ಳಂಬೆಳ್ಳ ಪಿ.ಎಸ್ ಐ ರವೀಂದ್ರನಾಥ ತಿಳಿಸಿದರು.

ಇನ್ನು ಕಾರ್ಯಕ್ರಮದಲ್ಲಿ  ಸೈಬರ್‌ ಅಪರಾಧ ಜಾಗೃತಿ ಕಾರ್ಯಕ್ರಮವನ್ನು ಉದೇಶಿಸಿ  ಮಾತನಾಡಿದ ಅವರು, ಇತ್ತೀಚೆಗೆ ಅಂತರ್ಜಾಲದ ದುರುಪಯೋಗ ಹೆಚ್ಚಾಗುತ್ತಿದೆ. ಜನರು ಒಂದು ಸಣ್ಣ ತಪ್ಪಿನಿಂದಾಗಿ ಹಣ ಹಾಗೂ ಮಹತ್ವದ ಮಾಹಿತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಮೂಲಕ ತಿಳಿದೋ ಅಥವಾ ತಿಳಿಯದೆಯೋ ವಿವಿಧ ಸಂಕಷ್ಟಗಳಿಗೆ ಸಿಲುಕಿ ನಲುಗುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕಳ್ಳಂಬೆಳ್ಳ ಠಾಣೆಯ ಎ ಎಸ್ ಐ ಶ್ರೀನಿವಾಸ್ ಮುಖ್ಯಪೇದೆಗಳಾದ ಶಾಹಿದ್, ಕೃಷ್ಣಮೂರ್ತಿ ,ಉಮೇಶ್ ಹಾಗೂ ರಜಿತ್ ಹಾಜರಿದ್ದರು ಈ ಕಾರ್ಯಕ್ರಮದಲ್ಲಿ ಸರಗಳ್ಳತನ ಮತ್ತು ಇತ್ತೀಚಿನ ಸೈಬರ್ ಅಪರಾಧಗಳ ಬಗ್ಗೆ ಅನಗತ್ಯ ಮೊಬೈಲ್ ಲಿಂಕ್ ಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.

Author:

...
Editor

ManyaSoft Admin

Ads in Post
share
No Reviews