ಬೆಳಗಾವಿ:
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಮುಕ್ತಾಯಗೊಳ್ಳಲು ಎರಡು ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ಪುಣ್ಯಸ್ನಾನಕ್ಕೆ ತೆರಳುತ್ತಿದ್ದ ಬೆಳಗಾವಿ ಗೋಕಾಕ್ ನಗರದ ಆರು ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಗೋಕಾಕ್ ನಗರದಿಂದ ಮಂಗಳವಾರ ಏಂಟು ಮಂದಿ ಕ್ರೂಸರ್‌ನಲ್ಲಿ ಮಹಾ ಕುಂಭಮೇಳಕ್ಕೆ ಹೊರಟಿದ್ದರು. ಇಂದು ಮುಂಜಾನೆ ಮಧ್ಯಪ್ರದೇಶ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಮಧ್ಯಪ್ರದೇಶದ ಜಬಲಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮೃತಪಟ್ಟಿದ್ದಾರೆ.
ಮಧ್ಯ ಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಬೆಳಗಿನ ಜಾವ ಕ್ರೂಸರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಆರು ಮಂದಿ ಕನ್ನಡಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.