ಸಿನಿಮಾ:
ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಲೇ ಗಾಯಕ ಸೋನು ನಿಗಮ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ರು. ಈ ವೇಳೆ ವಿದ್ಯಾರ್ಥಿಯೊಬ್ಬರು ಕನ್ನಡ ಹಾಡು ಹೇಳುವಂತೆ ಕೇಳಿದ್ರು.
ಈ ವೇಳೆ ಸೋನು ತಮ್ಮ ಗಾನವನ್ನು ನಿಲ್ಲಿಸಿ ಕನ್ನಡ ಭಾಷೆ ಮತ್ತು ಕರ್ನಾಟಕದ ಬಗ್ಗೆ ಗೌರವದಿಂದ ಮಾತನಾಡಿದ್ರು. ನಾನು ದಿ ಬೆಸ್ಟ್ ಸಾಂಗ್ಸ್ ಹಾಡಿರೋದು ಹೆಚ್ಚು ಕನ್ನಡದಲ್ಲೇ. ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ.
ಆದರೆ, ಆ ಹುಡುಗ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಕೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.