ಐಪಿಎಲ್ ಸೀಸನ್ 18ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಬೀಗಿದೆ. ಇಂದು ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಮತ್ತು ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಲಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ.
ಕಳೆದ ಬಾರಿ ತನ್ನ ಆಕ್ರಮಣಕಾರಿ ಆಟದ ಮೂಲಕವೇ ಎದುರಾಳಿ ತಂಡಗಳ ನಿದ್ದೆಗೆಡಿಸಿದ್ದ ಸನ್ ರೈಸರ್ಸ್ ಹೈದರಾಬಾದ್ ಈಬಾರಿ ಮತ್ತಷ್ಟು ಸ್ಪೋಟಕ ಆಟವಾಡುವ ಕಾತರದಲ್ಲಿದೆ. ತಂಡ ತನ್ನ ಆರಂಭಿಕ ಪಂದ್ಯದಲ್ಲಿ ಭಾನುವಾರ ಮಾಜಿ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ವಿರುದ್ಧ ತವರಿನ ಅಂಗಳದಲ್ಲಿ ಸೆಣಸಾಡಲಿದೆ.
ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಅಭಿನವ್ ಮನೋಹರ್, ಸಚಿನ್ ಬೇಬಿ, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಆ್ಯಡಂ ಝಂಪಾ, ಮೊಹಮ್ಮದ್ ಶಮಿ, ರಾಹುಲ್ ಚಹರ್, ಜಯದೇವ್ ಉನದ್ಕತ್, ಕಮಿಂದು ಮೆಂಡಿಸ್, ಅಥರ್ವ ಟೈಡೆ, ಸಿಮರ್‌ಜೀತ್ ಸಿಂಗ್, ಎಶನ್ ಮಾಲಿಂಗ, ಅನಿಕೇತ್ ವರ್ಮಾ ಇದ್ದಾರೆ.
ಇನ್ನು ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಶಿಮ್ರೋನ್ ಹೆಟ್ಮೆಯರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶುಭಂ ದುಬೆ, ವನಿಂದು ಹಸರಂಗ, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ, ಫಝಲ್ಹಕ್ ಫಾರೂಖಿ, ಯುಗ್ ಚರಕ್, ಮಹೇಶ್ ತೀಕ್ಷಣ, ಕ್ವೇನಾ ಮಫಕಾ, ಅಶೋಕ್ ಶರ್ಮಾ, ವೈಭವ್ ಸೂರ್ಯವಂಶಿ, ಕುನಾಲ್ ಸಿಂಗ್ ರಾಥೋಡ್ ಇದ್ದಾರೆ.