ಕೊರಟಗೆರೆ : ಸಿದ್ದರಬೆಟ್ಟ ತಪೋಕ್ಷೇತ್ರದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ

ಕೊರಟಗೆರೆ:

ಕೊರಟಗೆರೆ ತಾಲೂಕಿನ ಸುಪ್ರಸಿದ್ಧ ತಪೋಕ್ಷೇತ್ರ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಅತ್ಯಂತ ವಿಜೃಂಭಣೆಯಿಂದ ಸಾಗಿತು. ಸಿದ್ದೇಶ್ವರ ಸ್ವಾಮಿ ರಥೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತ ಸಾಗರವೇ ಹರಿದು ಬಂದಿತ್ತು. ರಥೋತ್ಸವಕ್ಕೆ ಕೊರಟಗೆರೆ ತಹಶೀಲ್ದಾರ್‌ ಕೆ.ಮಂಜುನಾಥ್‌ ಚಾಲನೆ ನೀಡಿದರು. ನಿನ್ನೆಯಿಂದ ಜಾತ್ರಾ ಮಹೋತ್ಸವ ಆರಂಭವಾಗಿದ್ದು ಏಫ್ರಿಲ್‌ 9ರವರೆಗೂ ಜಾತ್ರಾ ಅಂಗವಾಗಿ ಪೂಜಾ ಕೈಂಕಾರ್ಯಗಳು ಹಾಗೂ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.

ಇನ್ನು ಮುಜುರಾಯಿ ಇಲಾಖೆಯ ಸಹಯೋಗದೊಂದಿಗೆ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಇಲಾಖೆ ವತಿಯಿಂದ ಜಾತ್ರೆ ಮುಗಿಯುವವರೆಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ಸಿದ್ದೇಶ್ವರ ಸ್ವಾಮಿಗೆ ಗಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ. ನಾಗಣ್ಣರವರು ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ರವರ ಹೆಸರಿನಲ್ಲಿ ಶ್ರೀಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ರಥ ಎಳೆಯುತ್ತಿದ್ದಂತೆ ಭಕ್ತರು ಬಾಳೆಹಣ್ಣು, ದವನ ಎಸೆದು ಇಷಾರ್ಥ ಸಿದ್ದಿಗೆ ಪ್ರಾರ್ಥನೆ ಸಲ್ಲಿಸಿದರು. ರಥೋತ್ಸವಕ್ಕೆ ಬಂದ ಭಕ್ತರಿಗೆ ಮಜ್ಜಿಗೆ, ಪಾನಕ, ಹೆಸರುಬೇಳೆಯನ್ನು ವಿತರಣೆ ಮಾಡಲಾಯ್ತು. ಜೊತೆಗೆ ಜಾತ್ರೆ ಅಂಗವಾಗಿ ಭಕ್ತರಿಗೆ ಹೋಳಿಗೆ ಊಟವನ್ನು ವಿತರಿಸಲಾಯಿತು.

ಈ ವೇಳೆ ಮಾತನಾಡಿದ ತಹಶೀಲ್ದಾರ್‌ ಮಂಜುನಾಥ್‌, ಕ್ಷೇತ್ರದ ಜನಪ್ರಿಯ ಶಾಸಕರು ರಾಜ್ಯದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರ ಮಾರ್ಗದರ್ಶನದಂತೆ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆಯುತ್ತಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಇಲಾಖೆ ಮುಂದಾಗಿದ್ದು ದಾಸೋಹ ಭವನದ ದುರಸ್ತಿ ಕಾರ್ಯ, ಕುಡಿಯುವ ನೀರು, ಶೌಚಾಲಯ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಜೊತೆಗೆ ಮುಡಿ ತೆಗೆಯುವ ಸ್ಥಳದಲ್ಲಿ ಸಿಸಿಟಿವಿ ಅಳವಡಿಕೆ, ಸ್ವಚ್ಛತೆ ಇನ್ನು ಮುಂತಾದ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ತಿಳಿಸಿದರು.

Author:

...
Editor

ManyaSoft Admin

share
No Reviews