ಕೊರಟಗೆರೆ:
ಕೊರಟಗೆರೆ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಬಲಿಜ ಸಂಘದಿಂದ ಇಂದು ಕಾಲಜ್ಞಾನಿ ಶ್ರೀ ಯೋಗಿ ನಾರಾಯಣ ಯತೀಂದ್ರರ 299 ನೇ ಜಯಂತೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯಿತಿ ಇಓ ಅಪೂರ್ವ, ಸಿಪಿಐ ಅನಿಲ್, ಸಿಡಿಪಿಓ ಅಂಬಿಕಾ, ಸಮಾಜ ಕಲ್ಯಾಣ ಇಲಾಖೆ ಯಮುನಾ, ಕೊರಟಗೆರೆ ಬಲಿಜ ಸಂಘದ ಅಧ್ಯಕ್ಷ ಪದ್ಮನಾಭ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಶ್ವತ್ ನಾರಾಯಣ್, ಅರಕೆರೆ ಶಂಕರ, ಪುರುಷೋತ್ತಮ್, ನವೀನ್ ಸೇರಿದಂತೆ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.